alex Certify
ಕನ್ನಡ ದುನಿಯಾ       Mobile App
       

Kannada Duniya

ಸರಣಿ ಜಯದೊಂದಿಗೆ ICC Ranking ನಲ್ಲೂ ಟೀಂ ಇಂಡಿಯಾಕ್ಕೆ ಅಗ್ರಸ್ಥಾನ

ದಕ್ಷಿಣ ಆಫ್ರಿಕಾ ವಿರುದ್ಧದ 5ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದೆ. ಹರಿಣಗಳ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಒಂದು ವೇಳೆ ಕೊಹ್ಲಿ ಪಡೆ ಸೋಲು ಅನುಭವಿಸಿದ್ರೂ ನಂಬರ್ ವನ್ ಸ್ಥಾನಕ್ಕೆ ಯಾವುದೇ ಧಕ್ಕೆಯಿಲ್ಲ.

ಈ ಮೊದಲು ಭಾರತ ತಂಡ 119 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿತ್ತು. ಆದ್ರೆ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಜಯದ ಬಳಿಕ 122 ಅಂಕಗಳೊಂದಿಗೆ ಮೊದಲ ಸ್ಥಾನಕ್ಕೇರಿದೆ. ಅಗ್ರಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾ ಈಗ 118 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ.

ಕೊನೆಯ ಏಕದಿನ ಪಂದ್ಯವನ್ನು ಗೆದ್ದಲ್ಲಿ ಭಾರತ 123 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲೇ ಇರಲಿದೆ. ಸೋತರೂ 121 ಅಂಕಗಳೊಂದಿಗೆ ಅಗ್ರಸ್ಥಾನವನ್ನು ಕಾಪಾಡಿಕೊಳ್ಳಲಿದೆ. ವಿಶೇಷ ಅಂದ್ರೆ ಅಫ್ಘಾನಿಸ್ತಾನ ತಂಡ ಜಿಂಬಾಬ್ವೆಯನ್ನು ಹಿಂದಿಕ್ಕಿ ಐಸಿಸಿ ರ್ಯಾಂಕಿಂಗ್ ನಲ್ಲಿ 10 ನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

 

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...