alex Certify
ಕನ್ನಡ ದುನಿಯಾ       Mobile App
       

Kannada Duniya

ಗಂಗೂಲಿ ಪ್ರಕಾರ ಐಪಿಎಲ್ ಬೆಸ್ಟ್ ಕ್ಯಾಪ್ಟನ್ ಯಾರು ಗೊತ್ತಾ..?

ganguly-kkr-srkರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಸದ್ಯ ಭರ್ಜರಿ ಫಾರ್ಮ್ ನಲ್ಲಿದ್ದಾರೆ. ಮೈದಾನದಲ್ಲಷ್ಟೇ ಅಲ್ಲ ಜಾಹೀರಾತು ಕ್ಷೇತ್ರದಲ್ಲೂ ಮಿಂಚುತ್ತಿದ್ದಾರೆ. ಆದರೆ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಮಾತ್ರ ಐಪಿಎಲ್ ಬೆಸ್ಟ್ ಕ್ಯಾಪ್ಟನ್ ಪಟ್ಟವನ್ನು ಕೊಹ್ಲಿಗೆ ನೀಡಿಲ್ಲ. ಮತ್ಯಾರಿಗೆ ಅಂತೀರಾ? ಮುಂದೆ ಓದಿ.

ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನಲ್ಲಿ ಐಪಿಎಲ್ ಕ್ಯಾಪ್ಟನ್ ಗಳ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಸೌರವ್ ಗಂಗೂಲಿ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದಿದ್ದಾರೆ.

ಇಡೀ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸುತ್ತಿರುವ ರೀತಿ ನಿಜಕ್ಕೂ ಅದ್ಬುತ ಎಂದು ಗಂಗೂಲಿ ಹಾಡಿ ಹೊಗಳಿದ್ದಾರೆ. ವಿರಾಟ್ ಕೊಹ್ಲಿಯ ಆಟವನ್ನೂ ಶ್ಲಾಘಿಸಿರುವ ಗಂಗೂಲಿ, ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೌಲಿಂಗ್ ವಿಭಾಗದಲ್ಲಿ ವೈಫಲ್ಯ ಕಾಣುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ರೋಹಿತ್ ಶರ್ಮಾ, 9 ಪಂದ್ಯಗಳ ಪೈಕಿ ಐದು ಪಂದ್ಯಗಳಲ್ಲಿ ಅರ್ಧ ಶತಕ ದಾಖಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...