alex Certify
ಕನ್ನಡ ದುನಿಯಾ       Mobile App
       

Kannada Duniya

CSK ತಂಡಕ್ಕೆ ಬಿಗ್ ಶಾಕ್, ವೇಗದ ಬೌಲರ್ ನಿಗಿಡಿ ತವರಿಗೆ ವಾಪಸ್

ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್ ಲುಂಗಿ ನಿಗಿಡಿ ಐಪಿಎಲ್ ಬಿಟ್ಟು ತವರಿಗೆ ಮರಳಿದ್ದಾರೆ. ತಂದೆಯ ಹಠಾತ್ ನಿಧನದ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ಲುಂಗಿ ನಿಗಿಡಿ ತಂದೆ ಜೆರೋಮ್ ಗೆ ಇತ್ತೀಚೆಗಷ್ಟೆ ಬೆನ್ನಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

ಆಪರೇಷನ್ ಬಳಿಕ ಜೆರೋಮ್ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ನಿನ್ನೆ ಅವರು ಕೊನೆಯುಸಿರೆಳೆದಿದ್ದಾರೆ. ಲುಂಗಿ ತಂದೆಯ ನಿಧನದ ಸುದ್ದಿಯನ್ನು ಕುಟುಂಬಸ್ಥರು ಖಚಿತಪಡಿಸಿದ ಹಿನ್ನೆಲೆಯಲ್ಲಿ, ಅವರು ಡರ್ಬನ್ ಗೆ ಪ್ರಯಾಣ ಬೆಳೆಸಿದ್ರು.

ಲುಂಗಿ ನಿಗಿಡಿ ಉದಯೋನ್ಮುಖ ಆಟಗಾರ. ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಗಳು 50 ಲಕ್ಷ ರೂಪಾಯಿಗೆ ಖರೀದಿಸಿದ್ದರು. ಆದ್ರೀಗ ಐಪಿಎಲ್ ಪಂದ್ಯಗಳಿಗೆ ಲುಂಗಿ ನಿಗಿಡಿ ಅಲಭ್ಯರಾಗಿದ್ದಾರೆ. ಇತ್ತೀಚೆಗೆ ನಡೆದ ಸರಣಿಯಲ್ಲಿ ಲುಂಗಿ, ಭಾರತದ ವಿರುದ್ಧ 6 ವಿಕೆಟ್ ಪಡೆದಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...