alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ಮೊದಲೇ ಫಿಕ್ಸ್ ಆಗಿದೆಯಾ ಐಪಿಎಲ್ ಫೈನಲ್?

ಹೊಡಿ ಬಡಿ ಆಟವಾದ ಐಪಿಎಲ್ ಆರಂಭಗೊಂಡಾಗಿನಿಂದಲೂ ಹಲವು ವಿವಾದಗಳಿಗೆ ಕಾರಣವಾಗಿದೆ. ಸ್ಪಾಟ್ ಫಿಕ್ಸಿಂಗ್ ಆರೋಪದ ಹಿನ್ನೆಲೆಯಲ್ಲಿ ನಿಷೇಧಕ್ಕೊಳಪಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ತಂಡಗಳು ಈ ಬಾರಿ ಮತ್ತೆ ಮರಳಿ ಬಂದಿವೆ.

ಭಾನುವಾರದಂದು ಫೈನಲ್ ಪಂದ್ಯ ನಡೆಯಲಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಾಗಲೇ ಫೈನಲ್ ಪ್ರವೇಶಿಸಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಇಂದು ಎರಡನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಲಿವೆ.

ಈ ಮಧ್ಯೆ ಹಾಟ್ ಸ್ಟಾರ್ ವಿಡಿಯೋವೊಂದು ಲೀಕ್ ಆಗಿದ್ದು, ಐಪಿಎಲ್ ಫೈನಲ್ ಮೊದಲೇ ಫಿಕ್ಸ್ ಆಗಿದೆ ಎಂಬ ಅನುಮಾನಕ್ಕೆ ಕಾರಣವಾಗಿದೆ. ಹಾಟ್ ಸ್ಟಾರ್ ನ ಈ ವಿಡಿಯೋದಲ್ಲಿ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದ ಪ್ರಚಾರವಿದ್ದು, ಇದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ ಎಂದು ತೋರಿಸಲಾಗಿದೆ.  ಹೀಗಾಗಿ ಈ ಬಾರಿಯ ಐಪಿಎಲ್ ಫೈನಲ್ ಮೊದಲೇ ಫಿಕ್ಸ್ ಆಗಿದೆ ಎಂಬ ಅನುಮಾನ ಕ್ರಿಕೆಟ್ ಅಭಿಮಾನಿಗಳಿಂದ ವ್ಯಕ್ತವಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...