alex Certify
ಕನ್ನಡ ದುನಿಯಾ       Mobile App
       

Kannada Duniya

ಸೋಲಿನ ಸುಳಿಯಲ್ಲಿದ್ದ ಡೆಲ್ಲಿ ತಂಡಕ್ಕೆ ಬಿಗ್ ಶಾಕ್ !

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್.) ನಲ್ಲಿ ಸೋಲಿನ ಸುಳಿಯಲ್ಲಿರುವ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ.

ಗೌತಮ್ ಗಂಭೀರ್ ನಾಯಕತ್ವವನ್ನು ತ್ಯಜಿಸಿದ್ದು, ಯುವ ಆಟಗಾರ ಶ್ರೇಯಸ್ ಅಯ್ಯರ್ ಅವರಿಗೆ ನಾಯಕತ್ವ ವಹಿಸಲಾಗಿದೆ. ಪ್ರಸಕ್ತ ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿರುವ ಡೆಲ್ಲಿ 5 ಪಂದ್ಯಗಳಲ್ಲಿ ಸೋಲು ಕಂಡಿದೆ. ಅಲ್ಲದೇ ರನ್ ರೇಟ್ ನಲ್ಲಿ ಸಾಧನೆ ಮಾಡಿಲ್ಲ. ಇವೆಲ್ಲ ಕಾರಣಗಳಿಂದ ಗೌತಮ್ ಗಂಭೀರ್ ಡೆಲ್ಲಿ ತಂಡದ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದಾರೆ.

ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ನಾಯಕನಾಗಿ 2 ಬಾರಿ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗಂಭೀರ್, ಡೆಲ್ಲಿ ತಂಡದ ಕಳಪೆ ಪ್ರದರ್ಶನದ ಕಾರಣಕ್ಕೆ ನಾಯಕತ್ವ ತ್ಯಜಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...