alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ: ಬದಲಾಯ್ತು ಐಪಿಎಲ್ ವೇಳಾಪಟ್ಟಿ

ಕರ್ನಾಟಕ ವಿಧಾನಸಭೆ ಚುನಾವಣಾ ಬಿಸಿ ಐಪಿಎಲ್ ಗೆ ತಟ್ಟಿದೆ. ಐಪಿಎಲ್ ಆವೃತ್ತಿ 11ರ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ಭಾರತೀಯ ಕ್ರಿಕೆಟ್ ಕಂಟ್ರೋಲ್ ಬೋರ್ಡ್ ಗುರುವಾರ ಈ ಬಗ್ಗೆ ಮಾಹಿತಿ ನೀಡಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಐಪಿಎಲ್ ಆವೃತ್ತಿ 11ರ ಎರಡು ಪಂದ್ಯಗಳಲ್ಲಿ ಬದಲಾವಣೆಯಾಗಿದೆ. ಏಪ್ರಿಲ್ 21ರಂದು ದೆಹಲಿಯಲ್ಲಿ ನಡೆಯಬೇಕಿದ್ದ ಡೆಲ್ಲಿ ಡೇರ್ ಡೆವಿಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ 19ನೇ ಪಂದ್ಯ ಅದೇ ದಿನ ಅಂದ್ರೆ 21ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ಅದೇ ರೀತಿ ಏಪ್ರಿಲ್ 12ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಡೆಲ್ಲಿ ಡೇರ್ ಡೆವಿಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಅದೇ ದಿನ ಅಂದ್ರೆ ಏಪ್ರಿಲ್ 12ರಂದು ದೆಹಲಿಯಲ್ಲಿ ನಡೆಯಲಿದೆ. ಮೂರ್ನಾಲ್ಕು ದಿನಗಳ ಹಿಂದಷ್ಟೇ ಕರ್ನಾಟಕ ವಿಧಾನಸಭೆ ಚುನಾವಣಾ ದಿನಾಂಕ ಪ್ರಕಟವಾಗಿದೆ. ಆದ್ರೆ ಅನೇಕ ತಿಂಗಳ ಹಿಂದೆಯೇ ಐಪಿಎಲ್ ಪಂದ್ಯಾವಳಿ ವೇಳಾಪಟ್ಟಿ ಪ್ರಕಟವಾಗಿತ್ತು. ಚುನಾವಣೆ ದಿನಾಂಕ ಪ್ರಕಟವಾದ ನಂತ್ರ ಬಿಸಿಸಿಐ ವೇಳಾಪಟ್ಟಿ ಬದಲಾವಣೆಗೆ ಮುಂದಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...