alex Certify
ಕನ್ನಡ ದುನಿಯಾ       Mobile App
       

Kannada Duniya

ಐಪಿಎಲ್ ಹಬ್ಬಕ್ಕೆ ಶುರುವಾಯ್ತು ಕೌಂಟ್ ಡೌನ್

ipl 9

ಐಸಿಸಿ ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯಾವಳಿ ಮುಗಿದ ಬೆನ್ನಲ್ಲೇ, ಬಹುನಿರೀಕ್ಷೆಯ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಶನಿವಾರದಿಂದ ಚುಟುಕು ಕ್ರಿಕೆಟ್ ಇಂಡಿಯನ್ ಕ್ರಿಕೆಟ್ ಲೀಗ್ (ಐಪಿಎಲ್) ಗೆ ಚಾಲನೆ ದೊರೆಯಲಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್-9 ಉದ್ಘಾಟನಾ ಪಂದ್ಯದಲ್ಲಿ, ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ, ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ರೈಸಿಂಗ್ ಪುಣೆ ಸೂಪರ್ ಜಾಯಿಂಟ್ಸ್ ತಂಡವನ್ನು ಎದುರಿಸಲಿದೆ. ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗೌತಮ್ ಗಂಭೀರ್ ನಾಯಕತ್ವದ ಕೋಲ್ಕತಾ ನೈಟ್ ರೈಡರ್ಸ್, ಸುರೇಶ್ ರೈನಾ ನಾಯಕತ್ವದ ಗುಜರಾತ್ ಲಯನ್ಸ್, ಕಿಂಗ್ಸ್ ಇಲೆವನ್ ಪಂಜಾಬ್, ಸನ್ ರೈಸರ್ಸ್ ಹೈದರಾಬಾದ್, ಡೆಲ್ಲಿ ಡೇರ್ ಡೆವಿಲ್ಸ್ ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿವೆ.

ಸ್ಪಾಟ್ ಫಿಕ್ಸಿಂಗ್ ಆರೋಪಕ್ಕೆ ಸಿಲುಕಿ ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ತಾನ ರಾಯಲ್ಸ್ ತಂಡಗಳನ್ನು ಎರಡು ವರ್ಷ ನಿಷೇಧಿಸಲಾಗಿದ್ದು, ಪುಣೆ ಮತ್ತು ಗುಜರಾತ್ ಲಯನ್ಸ್ ತಂಡಗಳು ಹೊಸ ತಂಡಗಳಾಗಿವೆ. ಟಿ-20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಅಂತಿಮ ಓವರ್ ನಲ್ಲಿ ಗೆಲುವಿಗೆ 19 ರನ್ ಬೇಕಿದ್ದಾಗ ಸತತ 4 ಸಿಕ್ಸರ್ ಸಿಡಿಸಿದ ಕಾರ್ಲೋಸ್ ಬ್ರಾಥ್ ವೇಟ್ ಈ ಟೂರ್ನಿಯಲ್ಲಿ ಡೆಲ್ಲಿ ತಂಡದ ಪರ ಆಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...