alex Certify
ಕನ್ನಡ ದುನಿಯಾ       Mobile App
       

Kannada Duniya

ಯಾರಿಗೆ ಸಿಗಲಿದೆ IPL ಟ್ರೋಫಿಗೆ ಮುತ್ತಿಡುವ ಅವಕಾಶ?

ipl-10

ಇಂಡಿಯನ್ ಪ್ರೀಮಿಯರ್ ಲೀಗ್ 10 ನೇ ಆವೃತ್ತಿ ಅಂತಿಮ ಹಂತಕ್ಕೆ ಬಂದಿದೆ. ಪ್ಲೇ ಆಫ್ ಗೆ 4 ತಂಡಗಳು ಬಂದಿದ್ದು, ಯಾರು ಫೈನಲ್ ಗೆ ಎಂಟ್ರಿ ಕೊಡ್ತಾರೆ. ಯಾವ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ ಎಂಬುದು ಕ್ರಿಕೆಟ್ ಪ್ರೇಮಿಗಳಲ್ಲಿ ಬಹು ಚರ್ಚಿತ ವಿಷಯವಾಗಿದೆ.

ಮುಂಬೈ ಇಂಡಿಯನ್ಸ್, ರೈಸಿಂಗ್ ಪುಣೆ ಸೂಪರ್ ಜೈಂಟ್ಸ್, ಸನ್ ರೈಸರ್ಸ್ ಹೈದರಾಬಾದ್, ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಪ್ಲೇ ಆಫ್ ನಲ್ಲಿ ಮುಖಾಮುಖಿಯಾಗಲಿವೆ.

ಮುಂಬೈ ತಂಡ 14 ಪಂದ್ಯಗಳನ್ನಾಡಿ 10 ರಲ್ಲಿ ಜಯಗಳಿಸಿದೆ. ಪುಣೆ ಟೀಂ 14 ರಲ್ಲಿ 9 ಪಂದ್ಯ ಗೆದ್ದಿದ್ದು, ಹೈದರಾಬಾದ್ ತಂಡ 8 ಪಂದ್ಯಗಳನ್ನು ಗೆದ್ದಿದೆ. ಕೋಲ್ಕತ್ತ ಕೂಡ ಆಡಿದ 14 ಪಂದ್ಯಗಳಲ್ಲಿ 8 ರಲ್ಲಿ ಜಯಿಸಿದೆ.

ಮೇ 16 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡಗಳು ಅರ್ಹತಾ ಪಂದ್ಯದಲ್ಲಿ ಸೆಣಸಾಡಲಿವೆ. ಇದರಲ್ಲಿ ಗೆದ್ದ ತಂಡ ಫೈನಲ್ ಪ್ರವೇಶಿಸಲಿದೆ.

ಮೇ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಎಲಿಮಿನೇಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್, ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಇದರಲ್ಲಿ ಗೆದ್ದ ತಂಡ ಅರ್ಹತಾ ಸುತ್ತಿನಲ್ಲಿ ಸೋತ ತಂಡವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎದುರಿಸಬೇಕಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್ ತಲುಪಲಿದೆ.

ಹೈದರಾಬಾದ್ ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯುವ ಫೈನಲ್ ನಲ್ಲಿ ಐ.ಪಿ.ಎಲ್. ಟ್ರೋಫಿಗೆ ಮುತ್ತಿಡುವ ಅವಕಾಶ ಯಾವ ತಂಡಕ್ಕೆ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...