alex Certify
ಕನ್ನಡ ದುನಿಯಾ       Mobile App
       

Kannada Duniya

ಗಂಭೀರ್, ಉತ್ತಪ್ಪ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ

kkr-deli

ಕೋಲ್ಕತ್ತ: ಇಲ್ಲಿನ ಈಡನ್ ಗಾರ್ಡೆನ್ಸ್ ಮೈದಾನದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ, ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ ಭರ್ಜರಿ ಜಯಗಳಿಸಿದೆ.

ನಾಯಕ ಗೌತಮ್ ಗಂಭೀರ್ ಅಜೇಯ 71, ರಾಬಿನ್ ಉತ್ತಪ್ಪ 59 ಭರ್ಜರಿ ಅರ್ಧ ಶತಕ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 160 ರನ್ ಗಳಿಸಿದೆ.

ಸಂಜು ಸ್ಯಾಮ್ಸನ್ 60, ಶ್ರೇಯಸ್ ಅಯ್ಯರ್ 47, ಅಂಕಿತ್ ಅಜೇಯ 12 ರನ್ ಗಳಿಸಿದ್ದಾರೆ. 161 ಗೆಲುವಿನ ಗುರಿ ಪಡೆದ ಕೋಲ್ಕತ್ತ ಪರವಾಗಿ ರಾಬಿನ್ ಉತ್ತಪ್ಪ 33 ಎಸೆತಗಳಲ್ಲಿ 5 ಬೌಂಡರಿ, 4 ಸಿಕ್ಸರ್ ಒಳಗೊಂಡ 59 ರನ್ ಗಳಿಸಿದರು.

ಇನ್ನು 3.4 ಓವರ್ ಗಳು ಬಾಕಿ ಇರುವಂತೆಯೇ ಕೆ.ಕೆ.ಆರ್. 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿದೆ.

7 ವಿಕೆಟ್ ಅಂತರದಿಂದ ಭರ್ಜರಿ ಜಯಗಳಿಸಿದ ಕೋಲ್ಕತ್ತ ತಂಡ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...