alex Certify
ಕನ್ನಡ ದುನಿಯಾ       Mobile App
       

Kannada Duniya

IPL : ಅತಿ ಹೆಚ್ಚು ಮೊತ್ತಕ್ಕೆ ಭಾರತೀಯ ಕ್ರಿಕೆಟಿಗನ ಸೇಲ್

2018 ರ ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜಿನಲ್ಲಿ ಎಡಗೈ ವೇಗದ ಬೌಲರ್ ಜೈದೇವ್ ಉನಾದ್ಕತ್, ಭಾರತದ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದಾರೆ. ಜೈದೇವ್ ರನ್ನು 11.5 ಕೋಟಿ ರೂಪಾಯಿಗೆ ರಾಜಸ್ತಾನ ರಾಯಲ್ಸ್ ತಂಡ ಖರೀದಿಸಿದೆ.

ಕರ್ನಾಟಕದ ಕೆ.ಎಲ್. ರಾಹುಲ್ ಹಾಗೂ ಮನೀಶ್ ಪಾಂಡೆ ನಿನ್ನೆ 11 ಕೋಟಿ ರೂಪಾಯಿಗೆ ಬಿಕರಿಯಾಗಿದ್ದರು. ರಾಹುಲ್ ಕಿಂಗ್ಸ್ ಇಲವೆನ್ ಪಂಜಾಬ್ ತಂಡದ ಪಾಲಾದ್ರೆ, ಮನೀಶ್ ಪಾಂಡೆಯನ್ನು ಸನ್ ರೈಸರ್ಸ್ ಹೈದ್ರಾಬಾದ್ ತಂಡ ಖರೀದಿ ಮಾಡಿದೆ.

ಇಂಗ್ಲೆಂಡ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಬಿಟ್ರೆ ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾಗಿರುವ ಆಟಗಾರ ಅಂದ್ರೆ ಜೈದೇವ್. ಬೆನ್ ಸ್ಟೋಕ್ಸ್ ರನ್ನು ರಾಜಸ್ತಾನ ರಾಯಲ್ಸ್ ತಂಡ 12.50 ಕೋಟಿ ರೂಪಾಯಿಗೆ ಕೊಂಡುಕೊಂಡಿತ್ತು.

ಕರ್ನಾಟಕದ ಆಲ್ ರೌಂಡರ್ ಗೌತಮ್ ಕೃಷ್ಣಪ್ಪ ಕೂಡ ಭಾರೀ ಮೊತ್ತಕ್ಕೆ ಹರಾಜಾಗಿದ್ದಾರೆ. ಗೌತಮ್ ಮೂಲ ಬೆಲೆ 20 ಲಕ್ಷ ರೂಪಾಯಿ ಇತ್ತು. ಆದ್ರೆ ರಾಜಸ್ತಾನ ರಾಯಲ್ಸ್ ತಂಡ ಅವರನ್ನು 6.20 ಕೋಟಿ ರೂಪಾಯಿ ನೀಡಿ ಖರೀದಿಸಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...