alex Certify
ಕನ್ನಡ ದುನಿಯಾ       Mobile App
       

Kannada Duniya

ಧೋನಿ ಭರ್ಜರಿ ಬ್ಯಾಟಿಂಗ್ : ಪುಣೆಗೆ ಜಯ

msd-msd-msd

ಪುಣೆ: ಮಹೇಂದ್ರ ಸಿಂಗ್ ಧೋನಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದು, ರೈಸಿಂಗ್ ಪುಣೆ ಸೂಪರ್ ಜೈಂಟ್ ತಂಡ, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಜಯಗಳಿಸಿದೆ.

ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತು. ಹೆನ್ರಿಕೂಸ್ ಅಜೇಯ 55, ಶಿಖರ್ ಧವನ್ 30, ಕೇನ್ ವಿಲಿಯಮ್ಸನ್ 21, ವಾರ್ನರ್ 43 ರನ್ ಗಳಿಸಿದ್ದಾರೆ.

177 ರನ್ ಗೆಲುವಿನ ಗುರಿ ಪಡೆದ ಪುಣೆ ತಂಡದ ಪರವಾಗಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 34 ಎಸೆತಗಳಲ್ಲಿ 5 ಬೌಂಡರಿ, 3 ಸಿಕ್ಸರ್ ಒಳಗೊಂಡ ಅಜೇಯ 61 ರನ್ ಗಳಿಸಿದ್ದಾರೆ. ಕೊನೆಯ ಎಸೆತವನ್ನು ಬೌಂಡರಿ ಬಾರಿಸಿದ ಧೋನಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದಾರೆ.

ಆರ್. ತ್ರಿಪಾಠಿ 59, ಸ್ಟೀವ್ ಸ್ಮಿತ್ 27, ಮನೋಜ್ ತಿವಾರಿ ಅಜೇಯ 17 ರನ್ ಗಳಿಸಿದ್ದು, 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ನಿಗದಿತ ಗುರಿ ತಲುಪಿದ್ದು, 6 ವಿಕೆಟ್ ಅಂತರದಿಂದ ಜಯಗಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...