alex Certify
ಕನ್ನಡ ದುನಿಯಾ       Mobile App
       

Kannada Duniya

ಆರ್ ಸಿ ಬಿ ಸತತ ಸೋಲಿಗೆ ಕೊಹ್ಲಿ ಹೇಳಿದ್ದೇನು..?

Bengaluru : Royal Challengers Bangalore Skipper Virat Kohli reacts during IPL 8 match against Sunrisers Hyderabad at Chinnaswamy Stadium in Bengaluru on Monday. PTI Photo by Shailendra Bhojak (PTI4_13_2015_000216B)

ಐಪಿಎಲ್ 10ನೇ ಆವೃತ್ತಿಯಲ್ಲಿ ಆರ್ ಸಿ ಬಿ ನೀರಸ ಪ್ರದರ್ಶನ ಮುಂದುವರೆದಿದೆ. ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮಂಡಿಯೂರಿದೆ. ಈವರೆಗೆ ಆಡಿದ 13 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಪಡೆ ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಕಂಡಿದ್ದು, ಇದು ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ.

ವಿರಾಟ್ ಕೊಹ್ಲಿ ತನ್ನ ತಂಡದ ನೀರಸ ಪ್ರದರ್ಶನಕ್ಕೆ ಬೇಸರಗೊಂಡಿದ್ದಾರೆ. ಈ ಸಂಬಂಧ ವಿರಾಟ್ ಕೊಹ್ಲಿ ಅಭಿಮಾನಿಗಳ ಕ್ಷಮೆ ಕೇಳಿದ್ದಾರೆ. ಭಾನುವಾರದ ಸೋಲಿನ ನಂತ್ರ ಟ್ವೀಟ್ ಮಾಡಿದ ಕೊಹ್ಲಿ ಆರ್ ಸಿ ಬಿ ಅಭಿಮಾನಿಗಳ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾದ ಹೇಳಿದ್ದಾರೆ. ನಿರೀಕ್ಷೆಯ ಮಟ್ಟಕ್ಕೆ ಪ್ರದರ್ಶನ ತೋರಲಿಲ್ಲ. ಈ ಬಗ್ಗೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

ಮುಂದಿನ ಭಾನುವಾರ ಡೆಲ್ಲಿ ವಿರುದ್ಧ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಆರ್ ಸಿ ಬಿ ಕೊನೆಯ ಪಂದ್ಯ ಆಡಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...