alex Certify
ಕನ್ನಡ ದುನಿಯಾ       Mobile App
       

Kannada Duniya

ಕೈಕೈ ಹಿಸುಕಿಕೊಳ್ಳುವಂತಾಗಿದೆ ಆರ್.ಸಿ.ಬಿ.: ಕಾರಣ ಗೊತ್ತಾ…?

ಕ್ರಿಕೆಟ್ ಲೋಕದ ಕಲರ್ ಫುಲ್ ಟೂರ್ನಿ ಎಂದೇ ಹೇಳಲಾಗುವ ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್.)ನಲ್ಲಿ ‘ಈ ಸಲ ಕಪ್ ನಮ್ದೆ ಎನ್ನುತ್ತಿರುವ’ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್.ಸಿ.ಬಿ.) ಕೈಕೈ ಹಿಸುಕಿಕೊಳ್ಳುವಂತಾಗಿದೆ.

ಬೇರೆ ಬೇರೆ ತಂಡಗಳನ್ನು ಸೇರಿಕೊಂಡಿರುವ ಕನ್ನಡಿಗರು ಮತ್ತು ಹಿಂದೆ ಆರ್.ಸಿ.ಬಿ.ಯಲ್ಲಿದ್ದ ಆಟಗಾರರು ತಮ್ಮ ತಂಡಗಳ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದ್ದಾರೆ.

ಕನ್ನಡಿಗ ಕೆ.ಎಲ್. ರಾಹುಲ್ ಈ ಟೂರ್ನಿಯಲ್ಲಿ ಅತಿವೇಗದ ಅರ್ಧ ಶತಕ ದಾಖಲಿಸಿದ್ದಾರೆ. ಕ್ರಿಸ್ ಗೇಲ್ ಭರ್ಜರಿ ಶತಕ ಬಾರಿಸಿ ತಮ್ಮನ್ನು ಆಯ್ಕೆ ಮಾಡಿಕೊಳ್ಳದವರಿಗೆ ಟಾಂಗ್ ಕೊಟ್ಟಿದ್ದಾರೆ. ಇವರಿಬ್ಬರು ಪಂಜಾಬ್ ತಂಡದಲ್ಲಿ ಮಿಂಚುತ್ತಿದ್ದಾರೆ.

ಇನ್ನು ಶೇನ್ ವಾಟ್ಸನ್ ಚೆನ್ನೈ ತಂಡವನ್ನು ಸೇರಿಕೊಂಡಿದ್ದು, ಈ ಟೂರ್ನಿಯಲ್ಲಿ ಶತಕ ಗಳಿಸಿದ್ದಾರೆ. ಕನ್ನಡಿಗ ಕೆ. ಗೌತಮ್ ರಾಜಸ್ತಾನ ರಾಯಲ್ಸ್ ತಂಡದಲ್ಲಿದ್ದು, ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ.

ಆರ್.ಸಿ.ಬಿ. ನಾಯಕ ವಿರಾಟ್ ಕೊಹ್ಲಿ ‘ಈ ಸಲ ಕಪ್ ನಮ್ದೇ’ ಎನ್ನುತ್ತಿದ್ದಾರೆ. ಅಭಿಮಾನಿಗಳು ಕೂಡ ಅದನ್ನೇ ಹೇಳುತ್ತಿದ್ದಾರೆ. 5 ಪಂದ್ಯಗಳನ್ನಾಡಿರುವ ಆರ್.ಸಿ.ಬಿ. 2 ಪಂದ್ಯಗಳನ್ನು ಜಯಿಸಿ 3 ರಲ್ಲಿ ಸೋಲು ಕಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...