alex Certify
ಕನ್ನಡ ದುನಿಯಾ       Mobile App
       

Kannada Duniya

ಯುವಿ ಬ್ಯಾಟಿಂಗ್ ಆರ್ಭಟಕ್ಕೆ ಆರ್.ಸಿ.ಬಿ. ಕಂಗಾಲು

rcb-yuvi

ಹೈದರಾಬಾದ್: ಐ.ಪಿ.ಎಲ್. ಹಾಲಿ ಚಾಂಪಿಯನ್ ಸನ್ ರೈಸರ್ಸ್ ಹೈದರಾಬಾದ್ ತಂಡ, ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಜಯಗಳಿಸಿದೆ.

ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಯುವರಾಜ್ ಸಿಂಗ್ ಬ್ಯಾಟಿಂಗ್ ಅಬ್ಬರಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಚ್ಚಿದೆ.

ಮೊದಲಿಗೆ ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ತಂಡ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 207 ರನ್ ಗಳಿಸಿತು.

ಯುವರಾಜ್ ಸಿಂಗ್ 27 ಎಸೆತಗಳಲ್ಲಿ 3 ಸಿಕ್ಸರ್, 7 ಬೌಂಡರಿ ಒಳಗೊಂಡ 62 ರನ್ ಗಳಿಸಿದರು, ಹೆನ್ರಿಕಸ್ 52, ಶಿಖರ್ ಧವನ್ 40 ರನ್ ಗಳಿಸಿದರು.

208 ಗೆಲುವಿನ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ 19.4 ಓವರ್ ಗಳಲ್ಲಿ 172 ರನ್ ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು.

ಕ್ರಿಸ್ ಗೇಲ್ 32, ಟ್ರಾವಿಸ್ ಹೆಡ್ 30, ಕೇದಾರ್ ಜಾಧವ್ 31 ರನ್ ಗಳಿಸಿದ್ದಾರೆ. ಟಾಸ್ ಗೆದ್ದು ಫೀಲ್ಡಿಂಗ್ ಗೆ ಇಳಿದ ಆರ್.ಸಿ.ಬಿ. ಲೆಕ್ಕಾಚಾರ ಉಲ್ಟಾ ಆಯಿತು. ಮೊದಲ ಪಂದ್ಯದಲ್ಲೇ ಆರ್.ಸಿ.ಬಿ. ಸೋಲು ಕಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...