alex Certify
ಕನ್ನಡ ದುನಿಯಾ       Mobile App
       

Kannada Duniya

ಐರ್ಲೆಂಡ್ ಸರಣಿ ಗೆದ್ದ ಕೊಹ್ಲಿಗೆ ಹೆಚ್ಚಾಯ್ತು ತಲೆನೋವು

ಇಂಗ್ಲೆಂಡ್-ಐರ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಭರ್ಜರಿ ಆರಂಭ ಕಂಡಿದೆ. ಐರ್ಲೆಂಡ್ ವಿರುದ್ಧ ನಡೆದ ಎರಡು ಟಿ-20 ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿ ಗೆಲುವು ತನ್ನದಾಗಿಸಿಕೊಂಡಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಿರೀಕ್ಷೆಯಂತೆ ಎಲ್ಲವೂ ನಡೆದಿದೆ. ಆದ್ರೆ ಇದು ಕೊಹ್ಲಿ ತಲೆನೋವಿಗೂ ಕಾರಣವಾಗಿದೆ.

ಇಂಗ್ಲೆಂಡ್ ವಿರುದ್ಧದ ಪಂದ್ಯಗಳ ಮೇಲೆ ಕ್ರಿಕೆಟ್ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ. ಟೀಂ ಇಂಡಿಯಾ ಜವಾಬ್ದಾರಿ ಕೂಡ ಹೆಚ್ಚಿದೆ. ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನತೋರಿದ್ದಾರೆ. ಮುಂದಿನ ಪಂದ್ಯಗಳಲ್ಲಿ ಟೀಂ ಇಂಡಿಯಾ ಯಾವ ರೀತಿ ಆಟವಾಡಲಿದೆ ಎಂಬ ಕುತೂಲಹ ಎಲ್ಲರಿಗೂ ಇದೆ. ಇದೇ ಕೊಹ್ಲಿ ಸವಾಲಿಗೂ ಕಾರಣವಾಗಿದೆ.

ಎಲ್ಲ ಆಟಗಾರರು ಉತ್ತಮ ಪ್ರದರ್ಶನತೋರಿದ್ದಾರೆ. ಹಾಗಾಗಿ ಮುಂದಿನ ಪಂದ್ಯಗಳಿಗೆ ಯಾರನ್ನು ಆಯ್ಕೆ ಮಾಡುವುದು ಎಂಬ ತಲೆನೋವು ಶುರುವಾಗಿದೆ ಎಂದು ಕೊಹ್ಲಿ ಹೇಳಿದ್ದಾರೆ. ಆದ್ರೆ ಇದು ಉತ್ತಮ ಸಮಸ್ಯೆ. ಇದು ನನ್ನ ಖುಷಿಗೆ ಕಾರಣವಾಗಿದೆ. ಇದೊಂದು ಒಳ್ಳೆ ಪ್ರವಾಸವಾಗಿದ್ದು ಯುವ ಆಟಗಾರರು ಉತ್ತಮ ಆಡವಾಡ್ತಿದ್ದಾರೆ ಎಂದು ಕೊಹ್ಲಿ ಹೇಳಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...