alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ಹಯ್ಯ ಕುಮಾರ್ ಪರ ನಿಂತ ಕ್ರಿಕೆಟಿಗ

suresh-raina1

ದೇಶದ್ರೋಹಿ ಪ್ರಕರಣದಲ್ಲಿ ಬಂಧಿತರಾಗಿ ಬಿಡುಗಡೆಯಾಗಿರುವ ಜೆ ಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಪರವಾಗಿ ಭಾರತೀಯ ಕ್ರಿಕೆಟ್ ಆಟಗಾರ ಸುರೇಶ್ ರೈನಾ ಬ್ಯಾಟಿಂಗ್ ಮಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಖಾಸಗಿ ಚಾನೆಲ್ ವೊಂದರಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿದ್ದ ಕನ್ಹಯ್ಯ ಕುಮಾರ್ ಅವರ ವಿಚಾರವನ್ನು ಅಭಿನಂದಿಸಿರುವ ಸುರೇಶ್ ರೈನಾ, ಈ ಕುರಿತು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದು, ಕನ್ಹಯ್ಯ ಅವರ ಪ್ರತಿಯೊಂದು ಮಾತು ಸತ್ಯವಾಗಿವೆ ಎಂದು ನನಗೆ ಅನ್ನಿಸುತ್ತಿದೆ, ಪ್ರಾಮಾಣಿಕ ಹೋರಾಟಗಾರನಿಗೆ ತಾವು ವಂದಿಸುವುದಾಗಿ ಬರೆದುಕೊಂಡಿದ್ದಾರೆ.

ಈಗಾಗಲೇ ಸುರೇಶ್ ರೈನಾ ಹಾಕಿರುವ ಈ ಪೋಸ್ಟ್ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಷ್ಟೇ ಅಲ್ಲ, ಸುರೇಶ್ ರೈನಾ ಅವರ ಈ ಹೇಳಿಕೆಗೆ ಸಾಕಷ್ಟು ಪರ- ವಿರೋಧಗಳೂ ವ್ಯಕ್ತವಾಗುತ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...