alex Certify
ಕನ್ನಡ ದುನಿಯಾ       Mobile App
       

Kannada Duniya

ರಣಜಿ ಕ್ರಿಕೆಟ್: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಗೆಲುವು

ಮೈಸೂರು: ಇಲ್ಲಿನ ಗಂಗೋತ್ರಿ ಗ್ಲೇಡ್ಸ್ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ ಕರ್ನಾಟಕ ತಂಡ ಶುಭಾರಂಭ ಮಾಡಿದೆ.

ಅಸ್ಸಾಂ ವಿರುದ್ಧ ಇನಿಂಗ್ಸ್, 121 ರನ್ ಅಂತರದಿಂದ ಭರ್ಜರಿ ಜಯ ಗಳಿಸಿದೆ. ಅಸ್ಸಾಂ ಮೊದಲ ಇನಿಂಗ್ಸ್ ನಲ್ಲಿ 59.1 ಓವರ್ ಗಳಲ್ಲಿ 145 ರನ್ ಗಳಿಸಿತ್ತು. ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 126.4 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 469 ರನ್ ಗಳಿಸಿ ಡಿಕ್ಲೇರ್ಡ್ ಮಾಡಿಕೊಂಡಿತ್ತು.

ನಿನ್ನೆ 2 ನೇ ಇನಿಂಗ್ಸ್ ಆರಂಭಿಸಿದ್ದ ಅಸ್ಸಾಂ 169 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡಿತ್ತು. ಇಂದು ಆಟ ಮುಂದುವರೆಸಿ 203 ರನ್ ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡ ಅಸ್ಸಾಂ ಸೋಲು ಕಂಡಿದೆ.

ಕರ್ನಾಟಕದ ಪರವಾಗಿ ಉತ್ತಮ ಪ್ರದರ್ಶನ ನೀಡಿದ ವಿನಯ್ ಕುಮಾರ್ 4, ಅಭಿಮನ್ಯು ಮಿಥುನ್ ಹಾಗೂ ಕೆ. ಗೌತಮ್ 3 ವಿಕೆಟ್ ಪಡೆದಿದ್ದಾರೆ.

ಸ್ಕೋರ್: ಅಸ್ಸಾಂ ಮೊದಲ ಇನಿಂಗ್ಸ್ 145, ನೇ ಇನಿಂಗ್ಸ್ 203, ಕರ್ನಾಟಕ ಮೊದಲ ಇನಿಂಗ್ಸ್ 469

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...