alex Certify
ಕನ್ನಡ ದುನಿಯಾ       Mobile App
       

Kannada Duniya

ಕಿಕ್ ಬಾಕ್ಸಿಂಗ್ ನಲ್ಲಿ ಕೀರ್ತಿ ಪತಾಕೆ ಹಾರಿಸಿದ ಶಿವಮೊಗ್ಗ ಸ್ಪರ್ಧಿಗಳು

ಶಿವಮೊಗ್ಗ: ಗೋವಾದಲ್ಲಿ ಜೂನ್ 15, 16ರಂದು ಆಯೋಜಿಸಲಾಗಿದ್ದ ರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಜಿಲ್ಲಾ ಕಿಕ್ ಬಾಕ್ಸಿಂಗ್ ನ ಬಾಕ್ಸರ್ ಗಳು 2 ಚಿನ್ನದ ಪದಕ ಹಾಗೂ 2 ಬೆಳ್ಳಿ ಪದಕಗಳನ್ನು ಪಡೆದು ಜಿಲ್ಲೆಗೆ, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಎಂದು ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ್  ಜಿ. ಭಟ್ ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿ, ಗೋವಾದ ಪೆಡ್ಡೆಮ್ ಒಳಾಂಗಣ ಕ್ರೀಡಾಂಗಣದಲ್ಲಿ ಸ್ಪರ್ಧೆ  ಆಯೋಜಿಸಲಾಗಿತ್ತು. ಹಲವು ರಾಜ್ಯಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು. ಪೈಪೋಟಿ ನಡುವೆ ಶಿವಮೊಗ್ಗದ ಬಾಕ್ಸರ್ ಗಳು ಗೆಲುವು ಸಾಧಿಸುವ ಮೂಲಕ ಕೀರ್ತಿ ಪತಾಕೆ ಹಾರಿಸಿದ್ದಾರೆ. ಹಲವು ವರ್ಷಗಳಿಂದ ನಮ್ಮ ಸ್ಪರ್ಧಿಗಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನದ ಪದಕ ಗೆಲ್ಲುತ್ತಿದ್ದಾರೆ ಎಂದರು.

ಬಾಲಕರ ವಿಭಾಗದಲ್ಲಿ ರಾಯಲ್ ಡೈಮಂಡ್ ಇಂಗ್ಲಿಷ್ ಸ್ಕೂಲಿನ ಎಂ. ಸಂಜಯ್(12 ವರ್ಷದ) 27 ಕೆ.ಜಿ. ವಿಭಾಗದ ಸೆಮಿ ಕಾಂಟ್ಯಾಕ್ಟ್ನಲ್ಲಿ ಚಿನ್ನದ ಪದಕ ಪಡೆದಿರುತ್ತಾನೆ. ಹಾಗೆಯೇ ಆದಿ ಚುಂಚನಗಿರಿ ವಿದ್ಯಾಸಂಸ್ಥೆಯ ಜಿ.ಎನ್. ಷಣ್ಮುಖ (12 ವರ್ಷದ) 40 ಕೆ.ಜಿ. ವಿಭಾಗದ ಫುಲ್ ಕಾಂಟ್ಯಾಕ್ಟ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿದ್ದಾನೆ ಎಂದರು.

ಪುರುಷರ ವಿಭಾಗದಲ್ಲಿ ಬನ್ನಿಕೆರೆಯ ಆಕಾಶ್ 21 ವರ್ಷ ಮೇಲ್ಪಟ್ಟವರ ಮುಕ್ತ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಡಿವಿಎಸ್ ಸ್ವತಂತ್ರ ಪದವಿಪೂರ್ವ ಕಾಲೇಜಿನ ಕೆ. ತ್ರಿವೇಣಿ 17 ವರ್ಷದೊಳಗಿನವರ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿರುತ್ತಾರೆ ಎಂದರು. ಎಲ್ಲಾ ಚಿನ್ನ ಮತ್ತು ಬೆಳ್ಳಿ ಪದಕ ವಿಜೇತರಿಗೆ ಸಂಸ್ಥೆ ಅಭಿನಂದನೆ ಸಲ್ಲಿಸುತ್ತದೆ. ಮುಂದೆಯೂ ಕೂಡ ಇನ್ನೂ ಹೆಚ್ಚಿನ ಪದಕ ನೀಡಲು ತರಬೇತಿ ನೀಡಲಾಗುವುದು ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...