alex Certify
ಕನ್ನಡ ದುನಿಯಾ       Mobile App
       

Kannada Duniya

ಬದಲಾಗುತ್ತಾ ‘ಕಿಂಗ್ಸ್ XI ಪಂಜಾಬ್’ ತಂಡದ ಹೆಸರು…?

ಪ್ರಸಕ್ತ ಸಾಲಿನ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ ಪೂರ್ಣಗೊಂಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್(IPL) 11 ನೇ ಆವೃತ್ತಿಯ ಎಂಟು ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಈಗ ಹೊರ ಬಿದ್ದಿದೆ.

ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಹಲವು ಅನಿರೀಕ್ಷಿತ ಬೆಳವಣಿಗೆಗಳು ನಡೆದಿದ್ದು, ಕೆಲ ಕ್ರಿಕೆಟ್ ದಂತಕಥೆ ಹಾಗೂ ಐಪಿಎಲ್ ಸ್ಟಾರ್ ಆಟಗಾರರನ್ನು ಖರೀದಿ ಮಾಡಲು ಫ್ರಾಂಚೈಸಿಗಳು ಮನಸ್ಸು ಮಾಡಲಿಲ್ಲ. ಹಾಗೆ ಕೆಲ ಹೊಸಬರಿಗೆ ಐಪಿಎಲ್ ನಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ.

ಇದರ ಮಧ್ಯೆ ಮತ್ತೊಂದು ಬೆಳವಣಿಗೆ ನಡೆದಿದ್ದು, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮಾಲಕಿ ಪ್ರೀತಿ ಜಿಂಟಾ, ತಮ್ಮ ತಂಡದ ಹೆಸರನ್ನು ಬದಲಿಸಲು ಅವಕಾಶ ಕೊಡುವಂತೆ ಮನವಿ ಮಾಡಿರುವುದು ಕುತೂಹಲ ಕೆರಳಿಸಿದೆ.

ಬಿಸಿಸಿಐ ಗೆ ಈ ಕುರಿತು ಮನವಿ ಸಲ್ಲಿಸಲಾಗಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದು, ತಂಡದ ಹೆಸರು ಬದಲಾವಣೆಗೆ ಅಮೆರಿಕಾದ ಪ್ರಮುಖ ಬೇಸ್ ಬಾಲ್ ಟೂರ್ನಿಗಳಲ್ಲಿ ಅವಕಾಶ ಮಾಡಿಕೊಟ್ಟಿರುವುದನ್ನು ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ ಎನ್ನಲಾಗಿದೆ. ಬಿಸಿಸಿಐ ಇದಕ್ಕೆ ಅವಕಾಶ ಮಾಡಿಕೊಡುತ್ತದಾ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...