alex Certify
ಕನ್ನಡ ದುನಿಯಾ       Mobile App
       

Kannada Duniya

ಐ.ಪಿ.ಎಲ್.ನಲ್ಲಿ ದಾಖಲೆ: ಅತಿವೇಗದ ಅರ್ಧ ಶತಕ ಗಳಿಸಿದ ಕೆ.ಎಲ್. ರಾಹುಲ್

ಮೊಹಾಲಿ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ನ ಐ.ಎಸ್. ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಆಟಗಾರ ಕನ್ನಡಿಗ ಕೆ.ಎಲ್. ರಾಹುಲ್ ಅತಿವೇಗದ ಅರ್ಧ ಶತಕ ಗಳಿಸಿದ್ದಾರೆ. ಕೇವಲ 16 ಎಸೆತಗಳಲ್ಲಿ 51 ರನ್ ಗಳಿಸಿ ದಾಖಲೆ ಬರೆದಿದ್ದಾರೆ.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಡೆಲ್ಲಿ ಡೇರ್ ಡೆವಿಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿದೆ.

ಗೌತಮ್ ಗಂಭೀರ್ 55, ರಿಶಬ್ ಪಂತ್ 28, ಕ್ರಿಸ್ ಮೊರಿಸ್ ಅಜೇಯ 27 ರನ್ ಗಳಿಸಿದ್ದು, ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಪರವಾಗಿ ಮೊಹಿತ್ ಶರ್ಮ, ಮುಜಿಬುರ್ ರೆಹಮಾನ್ ತಲಾ 2 ವಿಕೆಟ್ ಪಡೆದಿದ್ದಾರೆ.

167 ರನ್ ಗೆಲುವಿನ ಗುರಿ ಪಡೆದ ಪಂಜಾಬ್ ಪರವಾಗಿ ಕೆ.ಎಲ್. ರಾಹುಲ್ ದಾಖಲೆಯ ಅರ್ಧ ಶತಕ ಗಳಿಸಿದ್ದಾರೆ. 16 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್ ಒಳಗೊಂಡ 51 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...