alex Certify
ಕನ್ನಡ ದುನಿಯಾ       Mobile App
       

Kannada Duniya

ದಾಖಲೆಯ ಅರ್ಧಶತಕ ಸಿಡಿಸಿದ ಕೆ.ಎಲ್.ರಾಹುಲ್

rahul

ಕರ್ನಾಟಕದ ಕೆ.ಎಲ್.ರಾಹುಲ್ ಟೆಸ್ಟ್ ಕ್ರಿಕೆಟ್ ನಲ್ಲಿ ಮತ್ತೊಂದು ದಾಖಲೆ ಮಾಡಿದ್ದಾರೆ. ಸತತ 7 ಅರ್ಧಶತಕ ಬಾರಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 85 ರನ್ ಗಳಿಸಿದ ರಾಹುಲ್, ಈ ಸಾಧನೆ ಮಾಡಿದ್ದಾರೆ.

ಭಾರತದ ಪರ ರಾಹುಲ್ ದ್ರಾವಿಡ್ ಹಾಗೂ ಗುಂಡಪ್ಪ ವಿಶ್ವನಾಥ್ ಸತತ 6 ಅರ್ಧಶತಕ ಬಾರಿಸಿದ ದಾಖಲೆ ಹೊಂದಿದ್ದರು. ಕಳೆದ ಪಂದ್ಯದಲ್ಲಿ ಈ ದಾಖಲೆಯನ್ನು ಸರಿಗಟ್ಟಿದ್ದ ರಾಹುಲ್, ಈಗ 7ನೇ ಅರ್ಧಶತಕ ಬಾರಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ಸತತ 7 ಅರ್ಧಶತಕ ಬಾರಿಸಿದವರಲ್ಲಿ ರಾಹುಲ್ 6ನೆಯವರು.

ಆ್ಯಂಡಿ ಫ್ಲವರ್, ಸರ್ ಎವರ್ಟನ್ ವೀಕಸ್, ಕುಮಾರ ಸಂಗಕ್ಕಾರ, ಕ್ರಿಸ್ ರೋಜರ್ಸ್ ಹಾಗೂ ಶಿವನಾರಾಯಣ್ ಚಂದ್ರಪಾಲ್ ಹೆಸರಲ್ಲಿ ಈ ದಾಖಲೆಯಿದೆ. ಜ್ವರದ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್, ಲಂಕಾ ವಿರುದ್ಧದ ಮೊದಲ ಪಂದ್ಯ ಆಡಿರಲಿಲ್ಲ. ನಂತರದ ಎರಡೂ ಮ್ಯಾಚ್ ನಲ್ಲಿ ಅರ್ಧಶತಕ ಸಿಡಿಸಿದ್ದಾರೆ. ಆದ್ರೆ ಇಂದು 85 ರನ್ ಗಳಿಗೆ ಔಟ್ ಆಗುವ ಮೂಲಕ ಶತಕ ವಂಚಿತರಾದ್ರು.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...