alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಹ್ಲಿ ಔಟ್ ಆಗ್ತಿದ್ದಂತೆ ಬೆಂಕಿ ಹಚ್ಚಿಕೊಂಡ ಪುಣ್ಯಾತ್ಮ….

ಕ್ರಿಕೆಟ್ ಹುಚ್ಚು ಹೆಚ್ಚಾದ್ರೆ ಆಪತ್ತು ನಿಶ್ಚಿತ. ಇದಕ್ಕೆ ಮಧ್ಯಪ್ರದೇಶದ ರತ್ಲಂ ನಿವಾಸಿ ಉತ್ತಮ ಉದಾಹರಣೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಔಟ್ ಆಗ್ತಿದ್ದಂತೆ ಬೇಸರಗೊಂಡ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಮಧ್ಯ ಪ್ರದೇಶದ ರತ್ಲಂನ ಡೀಸೆಲ್ ಶೆಡ್ ನಲ್ಲಿ ಕೆಲಸ ಮಾಡ್ತಿದ್ದ ನಿವೃತ್ತ ಕಾರ್ಮಿಕ ಬಾಬುಲಾಲ್ ಬೈರಾವ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಕೊಹ್ಲಿ ಔಟ್ ಆಗ್ತಿದ್ದಂತೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಶೇಕಡಾ 15ರಷ್ಟು ಸುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಪತ್ನಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಕೈ, ತಲೆ ಹಾಗೂ ಮುಖ ಸುಟ್ಟಿದೆ. ಆತ್ಮಹತ್ಯೆ ಯತ್ನಕ್ಕೆ ಕೊಹ್ಲಿ ಔಟ್ ಆಗಿದ್ದು ಕಾರಣವೆಂದು ಬಾಬುಲಾಲ್ ಹೇಳಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...