alex Certify
ಕನ್ನಡ ದುನಿಯಾ       Mobile App
       

Kannada Duniya

ವಿರಾಟ್ ಕೊಹ್ಲಿ ಬಗ್ಗೆ ‘ದಾದಾ’ ಹೇಳಿದ್ದೇನು ಗೊತ್ತಾ..?

kohlig

ಕೋಲ್ಕತಾ: ಟೆಸ್ಟ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿ ಮುನ್ನಡೆದಿದೆ. ನಾಯಕನಾಗಿ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸುವ ಜೊತೆಗೆ ತಾವೂ ಆಕ್ರಮಣಕಾರಿ ಆಟ ಪ್ರದರ್ಶಿಸುತ್ತಿದ್ದಾರೆ.

ವಿರಾಟ್ ಕೊಹ್ಲಿ ಅಮೋಘ ಆಟದ ಕುರಿತಾಗಿ ಈಗಾಗಲೇ ಅನೇಕ ದಿಗ್ಗಜರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಕೊಹ್ಲಿ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಕೊಹ್ಲಿ ನನಗಿಂತಲೂ ಎರಡು ಪಟ್ಟು ಆಕ್ರಮಣಕಾರಿ ನಾಯಕರಾಗಿದ್ದಾರೆ ಎಂದು ಕೊಂಡಾಡಿದ್ದಾರೆ.

ಸೌರವ್ ಗಂಗೂಲಿ ಫೌಂಡೇಷನ್ ಮತ್ತು ಕ್ರಿಕೆಟ್ ಸ್ಕೂಲ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಗಂಗೂಲಿ, ಆಕ್ರಮಣಕಾರಿ ನಾಯಕನಾಗಿ ಕೊಹ್ಲಿ ತಂಡವನ್ನು ಯಶಸ್ಸಿನತ್ತ ಮುನ್ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಆರಂಭವಾಗಿರುವ ಕ್ರಿಕೆಟ್ ಸ್ಕೂಲ್ ನಲ್ಲಿ ಪಿಚ್ ವಿಷನ್ ಕ್ರಿಕೆಟ್ ಟೆಕ್ನಾಲಜಿ ಮೂಲಕ ಆಟದ ಕೌಶಲ್ಯಗಳನ್ನು ತಿಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

2002 ರಲ್ಲಿ ಲಾರ್ಡ್ಸ್ ಮೈದಾನದಲ್ಲಿ ನಡೆದ ನ್ಯಾಟ್ ವೆಸ್ಟ್ ತ್ರಿಕೋನ ಸರಣಿಯ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಗೆದ್ದಾಗ, ಆಕ್ರಮಣಕಾರಿ ನಾಯಕನಾಗಿದ್ದ ಸೌರವ್ ಗಂಗೂಲಿ ಮೈದಾನದಲ್ಲಿಯೇ ಶರ್ಟ್ ತೆಗೆದು ತಿರುಗಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...