alex Certify
ಕನ್ನಡ ದುನಿಯಾ       Mobile App
       

Kannada Duniya

ಟೀಂ ಇಂಡಿಯಾ ನಾಯಕನಿಗೆ ವಿಶ್ರಾಂತಿ

ಭಾರತ-ಶ್ರೀಲಂಕಾ ಮಧ್ಯೆ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಸಿಡಿಸಿರುವ ನಾಯಕ ವಿರಾಟ್ ಕೊಹ್ಲಿ ಮುಂದಿನ ಯಾವುದೇ ಪಂದ್ಯಗಳನ್ನು ಆಡ್ತಿಲ್ಲ. ಮಾಹಿತಿ ಪ್ರಕಾರ ಕೊಹ್ಲಿ ಕೊನೆಯ ಟೆಸ್ಟ್ ಸೇರಿದಂತೆ ಏಕದಿನ ಪಂದ್ಯ ಹಾಗೂ ಟಿ-ಟ್ವೆಂಟಿ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

ಐಪಿಎಲ್ ನಂತ್ರ ವಿಶ್ರಾಂತಿಯಿಲ್ಲದೆ ಕೊಹ್ಲಿ ಅಂತರಾಷ್ಟ್ರೀಯ ಪಂದ್ಯಗಳನ್ನಾಡುತ್ತಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಮುನ್ನ ಕೊಹ್ಲಿಗೆ ವಿಶ್ರಾಂತಿಯ ಅಗತ್ಯವಿದೆ. ಈ ವಿಷ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಬೋರ್ಡ್ ಕೊಹ್ಲಿಗೆ ಮುಂದಿನ ಪಂದ್ಯಗಳಲ್ಲಿ ವಿಶ್ರಾಂತಿ ನೀಡಲು ಮುಂದಾಗಿದೆ.

ವಿರಾಟ್ ಕೊಹ್ಲಿ ವಿಶ್ರಾಂತಿ ನಂತ್ರ ಯಾರು ಪಂದ್ಯ ಮುನ್ನೆಡೆಸಲಿದ್ದಾರೆ ಎನ್ನುವ ಬಗ್ಗೆ ಈವರೆಗೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಅಜಿಂಕ್ಯ ರಹಾನೆ ಹಾಗೂ ರೋಹಿತ್ ಶರ್ಮಾ ಹೆಸರು ಕೇಳಿ ಬರ್ತಿದೆ. ಇಂದು ಸಭೆ ನಡೆಯಲಿದ್ದು, ಸಭೆ ಬಳಿಕ ಹೆಸರು ಹೊರ ಬೀಳುವ ಸಾಧ್ಯತೆಯಿದೆ.

ಆಯ್ಕೆ ಸಮಿತಿ ಸಭೆಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಲಿರುವ ಟೀಂ ಇಂಡಿಯಾ ಆಯ್ಕೆ ಕೂಡ ನಡೆಯುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...