alex Certify
ಕನ್ನಡ ದುನಿಯಾ       Mobile App
       

Kannada Duniya

ಹುತಾತ್ಮ ಯೋಧರಿಗೆ ಕಂಬನಿ ಮಿಡಿದ ಕೊಹ್ಲಿ, ಸೆಹ್ವಾಗ್

uri kohli

ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಕಂಬನಿ ಮಿಡಿದಿದ್ದಾರೆ.

ಕಾನ್ಪುರದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುವ ಮೊದಲ ಟೆಸ್ಟ್ ಪಂದ್ಯಕ್ಕೆ ಕೊಹ್ಲಿ ರೆಡಿಯಾಗುತ್ತಿದ್ದು, ತಮ್ಮ ಟ್ವಿಟರ್ ಖಾತೆಯಲ್ಲಿ ಉರಿ ದಾಳಿಯ ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ನನ್ನನ್ನು ಭಾವುಕನನ್ನಾಗಿ ಮಾಡಿದೆ. ಮಾತಿನಲ್ಲಿ ಅದನ್ನು ಹೇಳಲಿಕ್ಕೆ ಸಾಧ್ಯವಿಲ್ಲ. ಎಲ್ಲಾ ಧೈರ್ಯಶಾಲಿ ಹೃದಯಗಳಿಗೆ ಜೈ ಹಿಂದ್ ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ.

ಅದೇ ರೀತಿ ವೀರೇಂದ್ರ ಸೆಹ್ವಾಗ್ ಅವರು, ಉರಿ ದಾಳಿಯಲ್ಲಿ ಹುತಾತ್ಮರಾದ ಯೋಧರ ಪಾರ್ಥಿವ ಶರೀರಗಳ ಫೋಟೋ ಪೋಸ್ಟ್ ಮಾಡಿ, ಯೋಧರಿಗೆ ನಮನ. ಅವರಿಗೂ ಕುಟುಂಬಗಳಿವೆ. ತಾಯ್ನಾಡಿಗೆ ಸೇವೆ ಸಲ್ಲಿಸಿದ ಯೋಧರ ಈ ಫೋಟೋ ನೋಡಲು ನೋವಾಗುತ್ತದೆ. ಇದಕ್ಕೆ ಪ್ರತ್ಯುತ್ತರ ನೀಡಬೇಕಿದೆ ಎಂದು ಹೇಳಿದ್ದಾರೆ.

ನಮ್ಮ ರಕ್ಷಣೆ ಮಾಡುವ ಯೋಧರು ಹುತಾತ್ಮರಾಗಿದ್ದಾರೆ. ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುವುದಾಗಿ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...