alex Certify
ಕನ್ನಡ ದುನಿಯಾ       Mobile App
       

Kannada Duniya

ದ್ರಾವಿಡ್ ಪುತ್ರನ ಆಟಕ್ಕೆ ಅಭಿಮಾನಿಗಳು ಫಿದಾ

‘ದಿ ವಾಲ್’ ಖ್ಯಾತಿಯ ರಾಹುಲ್ ದ್ರಾವಿಡ್ ರ ಪುತ್ರ ಸಮೀತ್ ಬೆಂಗಳೂರಿನಲ್ಲಿ ನಡೆಯುತ್ತಿರುವ ಶಾಲಾ ಟೂರ್ನಿಯಲ್ಲಿ ಅಮೋಘ ಆಲ್ ರೌಂಡರ್ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿದ್ದಾರೆ.

ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಯ ವಿರುದ್ಧ ನಡೆದ ಪಂದ್ಯದಲ್ಲಿ ಸಮೀತ್ ಆಕರ್ಷಕ ಅರ್ಧ ಶತಕ ಬಾರಿಸಿ, ಅದಿತಿ ಇಂಟರ್ನ್ಯಾಷನಲ್ ಸ್ಕೂಲ್ ಗೆ ನೆರವಾದ್ರು. ಅಷ್ಟೇ ಅಲ್ಲ, ಕೇವಲ 9 ರನ್ ನೀಡಿ 3 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಸಮೀತ್ ಭರ್ಜರಿ ಪ್ರದರ್ಶನ ನೀಡಿರೋದು ಇದೇ ಮೊದಲೇನಲ್ಲ. ಈ ಹಿಂದೆ 2015 ರಲ್ಲೂ ಸಮೀತ್, 12 ವರ್ಷದೊಳಗಿನ ಕ್ರಿಕೆಟ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಶ್ರೇಷ್ಠ ಬ್ಯಾಟ್ಸ್ ಮನ್ ಪ್ರಶಸ್ತಿ ಪಡೆದುಕೊಂಡಿದ್ದರು.

ಶ್ರೀಲಂಕಾ ವಿರುದ್ಧ ನಡೆದ ಅಂಡರ್ 19 ಯೂತ್ ಟೆಸ್ಟ್ ಪಂದ್ಯದಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಮಗ ಅರ್ಜುನ್ ತೆಂಡೂಲ್ಕರ್, ಚೇತೋಹಾರಿ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದನ್ನು ಸ್ಮರಿಸಬಹುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...