alex Certify ಮೊಹಾಲಿಯಲ್ಲಿ ಮತ್ತೆ ಮಿಂಚಿದ ಎಂ.ಎಸ್. ಧೋನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಹಾಲಿಯಲ್ಲಿ ಮತ್ತೆ ಮಿಂಚಿದ ಎಂ.ಎಸ್. ಧೋನಿ

doni-mo-ms

ಮೊಹಾಲಿ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆದ 3 ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಮಹೇಂದ್ರಸಿಂಗ್ ಧೋನಿ ಮತ್ತೆ ಮಿಂಚಿದ್ದಾರೆ.

ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ, 2013 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಧೋನಿ ಅಜೇಯ 139 ರನ್ ಗಳಿಸಿ ಗಮನ ಸೆಳೆದಿದ್ದರು. 6 ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಭರ್ಜರಿ ಆಟವಾಡಿದ್ದರು. ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೊದಲು ಧೋನಿ, 280 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳಿಂದ 8978 ರನ್ ಗಳಿಸಿದ್ದರು.

ಇಂದು ತಮ್ಮ 281 ನೇ ಪಂದ್ಯದಲ್ಲಿ 4 ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಧೋನಿ, ಭರ್ಜರಿ ಆಟವಾಡಿದ್ದಾರೆ. 91 ಎಸೆತಗಳಲ್ಲಿ 3 ಸಿಕ್ಸರ್, 6 ಬೌಂಡರಿ ಒಳಗೊಂಡ 80 ರನ್ ಗಳಿಸಿದ್ದಾರೆ. ಇಂದಿನ ಪಂದ್ಯದಲ್ಲಿ 22 ರನ್ ಗಳಿಸುತ್ತಿದ್ದಂತೆ ಅವರು 9,000 ರನ್ ಗಡಿ ತಲುಪಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...