alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂಬೈ ಇಂಡಿಯನ್ಸ್ ಗೆ ಕೋಚ್ ಆದ ಶ್ರೀಲಂಕಾ ಮಾಜಿ ನಾಯಕ

mahela-jayawardene

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್)ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ರಧಾನ ಕೋಚ್ ಆಗಿ, ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಲ ಜಯವರ್ಧನೆ ನೇಮಕವಾಗಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಮಾಲೀಕರಾದ ನೀತಾ ಅಂಬಾನಿ, ಪ್ರತಿಭಾವಂತ ಆಟಗಾರರಾಗಿರುವ ಮಹೇಲ ಜಯವರ್ಧನೆ ತಂಡವನ್ನು ಯಶಸ್ಸಿನತ್ತ ಕೊಂಡೊಯ್ಯಲಿದ್ದಾರೆ ಎಂಬ ವಿಶ್ವಾಸವಿದೆ. ಅವರನ್ನು ಮುಂಬೈ ಇಂಡಿಯನ್ಸ್ ಕುಟುಂಬಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಯವರ್ಧನೆ, ಹೊಸ ಸವಾಲುಗಳನ್ನು ಎದುರಿಸಲು ಸಜ್ಜಾಗಿದ್ದು, ನಾನು ಕಲಿತ ಅನುಭವ ಕೌಶಲ್ಯಗಳನ್ನು ಬಳಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಪ್ರಧಾನ ಕೋಚ್ ಆಗಿ ಕಾರ್ಯನಿರ್ವಹಿಸಿದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರೊಂದಿಗಿನ ಒಪ್ಪಂದ ಅವಧಿ ಮುಗಿದಿದ್ದು, ಮಹೇಲ ಜಯವರ್ಧನೆ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...