alex Certify
ಕನ್ನಡ ದುನಿಯಾ       Mobile App
       

Kannada Duniya

ಢಾಕಾ ಪ್ರೀಮಿಯರ್ ಲೀಗ್ ನಲ್ಲಿ ಅಪರೂಪದ ಡಬಲ್ ಹ್ಯಾಟ್ರಿಕ್

ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಮಶ್ರಫೆ ಮೊರ್ತಝಾ, ವಿಶಿಷ್ಟ ಸಾಧನೆ ಮಾಡಿದ್ದಾರೆ. ಢಾಕಾ ಪ್ರೀಮಿಯರ್ ಲೀಗ್ ನ ಪಂದ್ಯವೊಂದರಲ್ಲಿ ಡಬಲ್ ಹ್ಯಾಟ್ರಿಕ್ ಪಡೆದಿದ್ದಾರೆ.

ಮೊರ್ತಝಾ ಅಬಹನಿ ಲಿಮಿಟೆಡ್ ತಂಡದ ಪರ ಆಡ್ತಿದ್ದಾರೆ. ನಿನ್ನೆ ಅಗ್ರನಿ ಬ್ಯಾಂಕ್ ವಿರುದ್ಧ ನಡೆದ ಪಂದ್ಯದಲ್ಲಿ ಡಬಲ್ ಹ್ಯಾಟ್ರಿಕ್ ಪಡೆದ್ರು. ಮೊದಲು ಬ್ಯಾಟಿಂಗ್ ಮಾಡಿದ ಅಬಹನಿ ತಂಡ 6 ವಿಕೆಟ್ ನಷ್ಟಕ್ಕೆ 290 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ ಅಗ್ರನಿ ಟೀಂ ಕೂಡ ಗೆಲುವಿನ ಸನಿಹದಲ್ಲಿತ್ತು. ಕೊನೆಯ ಓವರ್ ನಲ್ಲಿ 13 ರನ್ ಬೇಕಾಗಿತ್ತು.

ಕೊನೆಯ ಔವರ್ ನಲ್ಲಿ ಬೌಲಿಂಗ್ ಗೆ ಇಳಿದ ಮೊರ್ತಜಾ, ಮೊದಲ ಬಾಲ್ ಗೆ 1 ರನ್ ನೀಡಿದ್ರು. ನಂತರ ಸತತ ನಾಲ್ಕು ಬಾಲ್ ಗಳಲ್ಲಿ ನಾಲ್ಕು ವಿಕೆಟ್ ಪಡೆಯುವ ಮೂಲಕ ಹೊಸ ದಾಖಲೆ ಮಾಡಿದ್ರು. ಈ ಮೂಲಕ ಲಿಸ್ಟ್ ಎ ಮ್ಯಾಚ್ ನಲ್ಲಿ ಡಬಲ್ ಹ್ಯಾಟ್ರಿಕ್ ಪಡೆದ ಬಾಂಗ್ಲಾದೇಶದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...