alex Certify
ಕನ್ನಡ ದುನಿಯಾ       Mobile App
       

Kannada Duniya

ಅಫ್ಘಾನ್ ಕ್ರಿಕೆಟಿಗನ ಹೆಸರಲ್ಲಿದೆ ಈ ವಿಶಿಷ್ಟ ದಾಖಲೆ…!

ಅಫ್ಘಾನಿಸ್ತಾನದ ಮುಜೀಬ್ ಜದ್ರನ್ 21ನೇ ಶತಮಾನದಲ್ಲಿ ಜನಿಸಿದ ವಿಶ್ವದ ಮೊದಲ ಅಂತರಾಷ್ಟ್ರೀಯ ಕ್ರಿಕೆಟಿಗ. ಶಾರ್ಜಾದಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 4 ವಿಕೆಟ್ ಪಡೆಯುವ ಮೂಲಕ ಅಫ್ಘಾನ್ ತಂಡಕ್ಕೆ 138 ರನ್ ಗಳ ಗೆಲುವು ತಂದುಕೊಟ್ಟಿದ್ದಾರೆ.

ಮುಜೀಬ್ ಜನಿಸಿದ್ದು 2001ರ ಮಾರ್ಚ್ 28ರಂದು. 16ರ ಹರೆಯದಲ್ಲೇ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದಾರೆ. ಮೊದಲ ಪಂದ್ಯದಲ್ಲೇ 4 ವಿಕೆಟ್ ಪಡೆದು ಮಿಂಚಿದ್ದಾರೆ. ಐರ್ಲೆಂಡ್ ವಿರುದ್ಧದ ಭರ್ಜರಿ ಗೆಲುವಿನೊಂದಿಗೆ ಅಫ್ಘಾನಿಸ್ತಾನ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.

ಮೂರು ಪಂದ್ಯಗಳ ಸರಣಿ ಇದಾಗಿದ್ದು, ಉಳಿದೆರಡು ಪಂದ್ಯಗಳು ಡಿಸೆಂಬರ್ 7 ಮತ್ತು 10ರಂದು ನಡೆಯಲಿವೆ. ಐರ್ಲೆಂಡ್ ನ ಆಲ್ ರೌಂಡರ್ ಗ್ಯಾಬಿ ಲೆವಿಸ್ ಈ ಶತಮಾನದಲ್ಲಿ ಜನಿಸಿದ ಮೊದಲ ಅಂತರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಎನಿಸಿಕೊಂಡಿದ್ದಾರೆ. 2014ರಲ್ಲಿ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಎಂಟ್ರಿ ಕೊಟ್ಟಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...