alex Certify
ಕನ್ನಡ ದುನಿಯಾ       Mobile App
       

Kannada Duniya

ಕೇವಲ 61 ರನ್ ಅಂತರದಲ್ಲಿ ಬಿತ್ತು 7 ವಿಕೆಟ್…!

ಇಂಗ್ಲೆಂಡ್ ಪ್ರವಾಸದಲ್ಲಿ ಮತ್ತೊಮ್ಮೆ ಟೀಮ್ ಇಂಡಿಯಾದ ಬ್ಯಾಟಿಂಗ್ ವೈಫಲ್ಯ ಅನಾವರಣವಾಗಿದೆ. ಸೌಥಾಂಪ್ಟನ್ ನ ರೋಸ್ ಬೌಲ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿ ಪಡೆ 60 ರನ್ ಗಳಿಂದ ಸೋಲು ಕಂಡಿದೆ.

ಆತಿಥೇಯ ಇಂಗ್ಲೆಂಡ್ 4ನೇ ದಿನದಾಟದಲ್ಲಿ 271 ರನ್ ಗಳಿಗೆ ಆಲೌಟ್ ಆಯಿತು. ಸವಾಲಿನ ಗುರಿಯನ್ನು ಹಿಂಬಾಲಿಸಿದ ಟೀಮ್ ಇಂಡಿಯಾ ಓಪನರ್ಸ್ ಒತ್ತಡವನ್ನು ಮೆಟ್ಟಿ ನಿಲ್ಲುವಲ್ಲಿ ವಿಫಲರಾದ್ರು. ಪರಿಣಾಮ ಸ್ಟುವರ್ಟ್ ಬ್ರಾಡ್ ಹಾಗೂ ಜೇಮ್ಸ್ ಆ್ಯಂಡರ್ಸನ್ ತೋಡಿದ ಖೆಡ್ಡಾಗೆ ಬಲಿಯಾದ್ರು. ಮೊದಲ ಇನ್ನಿಂಗ್ಸ್ ನಲ್ಲಿ ಶತಕದ ಸಾಧನೆ ಮಾಡಿದ್ದ ಚೇತೇಶ್ವರ್ ಪೂಜಾರ 5 ರನ್ ಗಳಿಗೆ ಆಟ ಮುಗಿಸಿದ್ರು.

4ನೇ ವಿಕೆಟ್ ಗೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ಅಜಿಂಕ್ಯ ರಹಾನೆ ಗೆಲುವಿನ ಆಸೆ ಚಿಗುರಿಸಿದ್ರು. ಈ ಸ್ಟಾರ್ ಪ್ಲೇಯರ್ಸ್ ಬ್ಯಾಟ್ ಮಾಡುವ ವೇಳೆ ಟೀಮ್ ಇಂಡಿಯಾ ಜಯದ ಲೆಕ್ಕಾಚಾರ ಹಾಕಿಕೊಂಡಿತ್ತು. ಈ ಜೋಡಿ ನಾಲ್ಕನೇ ವಿಕೆಟ್ ಗೆ ಶತಕದ ಜೊತೆಯಾಟವನ್ನು ನೀಡಿ, ಸೋಲಿನ ಅಂತರವನ್ನು ಕಡಿಮೆ ಮಾಡಿತು.

123 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸುಸ್ಥಿತಿಯಲ್ಲಿದ್ದ ಟೀಮ್ ಇಂಡಿಯಾ ಕೊನೆಯಲ್ಲಿ ಪಟ ಪಟನೆ ವಿಕೆಟ್ ಕಳೆದು ಕೊಂಡಿತು. ಕೇವಲ 61 ರನ್ ಗಳ ಅಂತರದಲ್ಲಿ ಪ್ರಮುಖ ಏಳು ವಿಕೆಟ್ ಗಳನ್ನು ಕಳೆದುಕೊಂಡ ಕೊಹ್ಲಿ ಪಡೆ, ಮತ್ತೊಂದು ಸೋಲಿಗೆ ಶರಣಾಯಿತು. ಐದು ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ 3-1 ರಿಂದ ಮುನ್ನಡೆ ಸಾಧಿಸಿದೆ. ನಾಲ್ಕನೇ ಟೆಸ್ಟ್ ನಲ್ಲಿ ಅಮೋಘ ಪ್ರದರ್ಶನ ನೀಡಿದ ಮೋಯಿನ್ ಅಲಿಗೆ ಪಂದ್ಯ ಶ್ರೇಷ್ಠ ಗರಿ ಸಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...