alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಮೊಹಮ್ಮದ್ ಶಮಿಗೆ ಗಂಭೀರ ಗಾಯ

ನವದೆಹಲಿ: ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಡೆಹ್ರಾಡೂನ್ ನಿಂದ ಕಾರಿನಲ್ಲಿ ದೆಹಲಿಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಟ್ರಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಶಮಿ ಅವರ ತಲೆಗೆ ಪೆಟ್ಟಾಗಿದೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಹೊಲಿಗೆ ಹಾಕಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ಬಳಿಕ ಶಮಿ ಖಾಸಗಿ ಸ್ಥಳಕ್ಕೆ ತೆರಳಿದ್ದಾರೆ. ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಚೇತರಿಸಿಕೊಳ್ಳಲು ಸಮಯ ಬೇಕಾಗಬಹುದೆಂದು ಹೇಳಲಾಗಿದೆ.

ಡೆಹ್ರಾಡೂನ್ ನಲ್ಲಿ ಕ್ರಿಕೆಟಿಗ ಅಭಿಮನ್ಯು ಅವರ ತಂದೆ ಈಶ್ವರನ್ ಅವರಿಗೆ ಸೇರಿದ ಕ್ರಿಕೆಟ್ ಅಕಾಡೆಮಿಗೆ ಶಮಿ ಭೇಟಿ ನೀಡಿದ್ದರು. ಅಲ್ಲಿಂದ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ. ಇತ್ತೀಚೆಗಷ್ಟೇ ಪತ್ನಿ ಹಸೀನ್ ಜಹಾನ್ ಸರಣಿ ಆರೋಪಗಳನ್ನು ಮಾಡಿದ್ದರಿಂದ ಶಮಿ ಭಾರೀ ಸುದ್ದಿಯಲ್ಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...