alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ನಿರ್ಮಾಣವಾಗಲಿವೆ ಮತ್ತೆ 4 ಕ್ರೀಡಾಂಗಣಗಳು

ಕಂಠೀರವ ಕ್ರೀಡಾಂಗಣ ಮಾದರಿಯಲ್ಲೇ ನಗರದ ನಾಲ್ಕು ಭಾಗದಲ್ಲಿ ಕ್ರೀಡಾಂಗಣ ನಿರ್ಮಿಸಲು 17 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ನವೀಕರಣಗೊಂಡ ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ ಬಜೆಟ್‌ನಲ್ಲಿ ಕಂಠೀರವ ಕ್ರೀಡಾಂಗಣ ಮಾದರಿಯಲ್ಲೇ ನಗರದ ದೇವನಹಳ್ಳಿ, ತಾವರೆಕೆರೆ, ಗುಂಜೂರು, ಎಚ್.ಎಸ್‌.ಆರ್. ಲೇಔಟ್‌ನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಹಣ ಮಂಜೂರು ಮಾಡಿದ್ದು, ಎರಡು ಜಾಗದಲ್ಲಿ ಕೆಲಸ ಶುರು ಮಾಡುವ ಹಂತ ತಲುಪುದ್ದೇವೆ ಎಂದು ಹೇಳಿದ್ದಾರೆ.

ಕಂಠೀರವ ಕ್ರೀಡಾ ಸಂಕೀರ್ಣವನ್ನು ಅಭಿವೃದ್ಧಿಪಡಿಸಲು ಹಲವು ಕಾರ್ಯಕ್ರಮ ಹಾಕಿಕೊಂಡಿದ್ದು, ಇಲ್ಲಿನ ಶೌಚಾಲಯ ಮರುನಿರ್ಮಾಣಕ್ಕೆ 2 ಕೋಟಿ ರೂ. ಹಣ ವೆಚ್ಚ ಮಾಡಲಾಗಿದೆ. 10 ವರ್ಷ ಹಳೆಯ ಸಿಂಥೆಟಿಕ್ ಟ್ರಾಕ್ ಮೇಲ್ದರ್ಜೆಗೇರಿಸಲು 3.5 ಕೋಟಿ ರು.ಗಳಿಗೆ ಟೆಂಡರ್ ಕರೆಯಲಾಗಿದೆ.‌ ಒಂದು ತಿಂಗಳೊಳಗಾಗಿ ಕೆಲಸ ಪ್ರಾರಂಭ ಮಾಡಲಾಗುವುದು ಎಂದು ಪರಮೇಶ್ವರ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...