alex Certify
ಕನ್ನಡ ದುನಿಯಾ       Mobile App
       

Kannada Duniya

ಕಿರಿಯರ ಆಯ್ಕೆ ಸಮಿತಿಗೆ ವೆಂಕಟೇಶ್ ಪ್ರಸಾದ್ ರಾಜೀನಾಮೆ

ಭಾರತದ ಕಿರಿಯ ಆಟಗಾರರ ತಂಡ ವಿಶ್ವಕಪ್ ಗೆದ್ದ ಸಂಭ್ರಮದಲ್ಲಿರುವಾಗಲೇ ಕಿರಿಯರ ಆಯ್ಕೆ ಸಮಿತಿ ಮುಖ್ಯಸ್ಥರಾಗಿದ್ದ ವೆಂಕಟೇಶ್ ಪ್ರಸಾದ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿ ಮೂಡಿಸಿದೆ.

ಕಳೆದ 30 ತಿಂಗಳಿನಿಂದಲೂ ಆಯ್ಕೆ ಸಮಿತಿ ಮುಖ್ಯಸ್ಥರಾಗಿದ್ದ ವೆಂಕಟೇಶ್ ಪ್ರಸಾದ್ ತಮ್ಮ ರಾಜೀನಾಮೆಗೆ ವೈಯಕ್ತಿಕ ಕಾರಣವೆಂದು ತಿಳಿಸಿದ್ದಾರೆನ್ನಲಾಗಿದ್ದು, ಆದರೆ ಭಾರತದ ಅಂಡರ್ 19 ತಂಡ ವಿಶ್ವಕಪ್ ಗೆದ್ದ ವೇಳೆ ಆಟಗಾರರು, ಕೋಚ್ ಹಾಗೂ ಸಿಬ್ಬಂದಿಗೆ ನಗದು ಬಹುಮಾನ ಘೋಷಿಸಿದ್ದ ಬಿಸಿಸಿಐ, ಆಯ್ಕೆ ಸಮಿತಿಯನ್ನು ಕಡೆಗಣಿಸಿದ್ದು, ವೆಂಕಟೇಶ್ ಪ್ರಸಾದ್ ರ ಅಸಮಾಧಾನಕ್ಕೆ ಕಾರಣವೆನ್ನಲಾಗಿದೆ.

ಕಿರಿಯ ಆಟಗಾರರ ಆಯ್ಕೆಯಲ್ಲಿ ತಮ್ಮ ನೇತೃತ್ವದ ಸಮಿತಿ ಸೂಕ್ತ ನಿರ್ಧಾರ ಕೈಗೊಂಡಿದ್ದರೂ ತಂಡದ ಯಶಸ್ಸಿನ ಬಳಿಕ ಕಡೆಗಣಿಸಿರುವುದು ವೆಂಕಟೇಶ್ ಪ್ರಸಾದ್ ರ ಬೇಸರಕ್ಕೆ ಕಾರಣವಾಗಿದೆ. ಅಲ್ಲದೇ ಮುಂಬರುವ ಐಪಿಎಲ್ ಟೂರ್ನಿ ವೇಳೆ ತಂಡವೊಂದರಲ್ಲಿ ವೆಂಕಟೇಶ್ ಪ್ರಸಾದ್ ಪ್ರಮುಖ ಪಾತ್ರ ವಹಿಸಲಿದ್ದಾರೆನ್ನಲಾಗುತ್ತಿದ್ದು, ಇದು ರಾಜೀನಾಮೆಗೆ ಮತ್ತೊಂದು ಕಾರಣವಿರಬಹುದೆಂದು ಹೇಳಲಾಗುತ್ತಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...