alex Certify
ಕನ್ನಡ ದುನಿಯಾ       Mobile App
       

Kannada Duniya

ಧೋನಿಗೆ ‘ಪದ್ಮಭೂಷಣ’, ಶ್ರೀಕಾಂತ್ ಗೆ ‘ಪದ್ಮಶ್ರೀ’

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಈ ಸಾಲಿನ ‘ಪದ್ಮಭೂಷಣ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. 69 ನೇ ಗಣರಾಜ್ಯೋತ್ಸವಕ್ಕೂ ಮುನ್ನ ಸಾಧಕರಿಗೆ ‘ಪದ್ಮ’ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, 73 ಸಾಧಕರು ಪದ್ಮಶ್ರೀ, 3 ಸಾಧಕರು ಪದ್ಮವಿಭೂಷಣ ಹಾಗೂ 9 ಸಾಧಕರು ಪದ್ಮಭೂಷಣ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಕ್ರೀಡಾ ಕ್ಷೇತ್ರದಿಂದ ಮಹೇಂದ್ರ ಸಿಂಗ್ ಧೋನಿಯವರೊಂದಿಗೆ ಬಿಲಿಯರ್ಡ್ಸ್ ಚಾಂಪಿಯನ್ ಪಂಕಜ್ ಅಡ್ವಾನಿಯವರಿಗೂ ‘ಪದ್ಮಭೂಷಣ’ ಪ್ರಶಸ್ತಿ ನೀಡಲಾಗಿದೆ. 2017 ರ 48 ಕೆ.ಜಿ. ವಿಭಾಗದಲ್ಲಿ ವಿಶ್ವ ವೇಯ್ಟ್ ಚಾಂಪಿಯನ್ ಆಗಿರುವ ಸೈಕೋಮ್ ಮೀರಾಬಾಯಿ ಚಾನೂ, ಏಷ್ಯನ್ ಗೇಮ್ಸ್ ಟೆನಿಸ್ ಚಿನ್ನದ ಪದಕ ವಿಜೇತ ಸೋಮದೇವ್, ಖ್ಯಾತ ಬ್ಯಾಡ್ಮಿಂಟನ್ ತಾರೆ ಕಿಡಂಬಿ ಶ್ರೀಕಾಂತ್, ಪ್ಯಾರಾಲಂಪಿಕ್ ಚಿನ್ನದ ಪದಕ ವಿಜೇತ ಮುರಳಿಕಾಂತ್ ಪೇಟ್ಕರ್ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ ಘೋಷಿಸಲಾಗಿದೆ.

ಕ್ರೀಡಾ ಕ್ಷೇತ್ರದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ ಸಾಧಕರಿಗೆ ಈ ಅತ್ಯುನ್ನತ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...