alex Certify
ಕನ್ನಡ ದುನಿಯಾ       Mobile App
       

Kannada Duniya

ಸೇನಾ ಸಮವಸ್ತ್ರದಲ್ಲಿ ಪ್ರಶಸ್ತಿ ಸ್ವೀಕರಿಸಿದ ಧೋನಿ

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಸೋಮವಾರದಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಿಂದ ಪ್ರತಿಷ್ಟಿತ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಸೇನೆಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಹೊಂದಿರುವ ಧೋನಿ, ಸೇನಾ ಸಮವಸ್ತ್ರ ಧರಿಸಿಕೊಂಡು ಬಂದು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಮತ್ತೊಂದು ವಿಶೇಷವೆಂದರೆ 2011 ರಲ್ಲಿ ಇದೇ ದಿನ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಗೆದ್ದಿತ್ತು. ಈ ಪಂದ್ಯದಲ್ಲಿ ಸಿಕ್ಸರ್ ಬಾರಿಸುವ ಮೂಲಕ ವಿನ್ನಿಂಗ್ ಶಾಟ್ ಹೊಡೆದಿದ್ದ ಧೋನಿ, ಭಾರತೀಯರ ಸಂಭ್ರಮವನ್ನು ಹೆಚ್ಚಿಸಿದ್ದರು.

ಧೋನಿ ನೇತೃತ್ವದ ಅಂದಿನ ಟೀಮ್ ಇಂಡಿಯಾ, ವಿಶ್ವ ಟಿ20 ಚಾಂಪಿಯನ್ಸ್ ಟ್ರೋಫಿಯನ್ನೂ ಎತ್ತಿ ಹಿಡಿಯುವ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ ಭಾರತ ನಂಬರ್ 1 ಪಟ್ಟಕ್ಕೇರಿತ್ತು. ದೇಶದ ಪ್ರತಿಷ್ಟಿತ ಪದ್ಮಭೂಷಣ ಪ್ರಶಸ್ತಿಗೆ ಮಹೇಂದ್ರ ಸಿಂಗ್ ಧೋನಿ ಭಾಜರಾಗಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...