alex Certify
ಕನ್ನಡ ದುನಿಯಾ       Mobile App
       

Kannada Duniya

ಟಿ -20 ಸರಣಿ ಕ್ಲೀನ್ ಸ್ವೀಪ್ ಗುರಿಯಲ್ಲಿ ಟೀಂ ಇಂಡಿಯಾ

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಟಿ -20 ಸರಣಿಯ 3 ನೇ ಪಂದ್ಯ ನಡೆಯಲಿದ್ದು, ಭಾರತ ತಂಡ ಸರಣಿ ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ.

ಈಗಾಗಲೇ 2 ಪಂದ್ಯಗಳೊಂದಿಗೆ ಸರಣಿಯನ್ನು ವಶಪಡಿಸಿಕೊಂಡಿರುವ ರೋಹಿತ್ ಶರ್ಮಾ ನೇತೃತ್ವದ ಬಳಗ, ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದ್ದು, ಪ್ರವಾಸಿ ಶ್ರೀಲಂಕಾ ಕೊನೆಯ ಪಂದ್ಯವನ್ನು ಗೆಲ್ಲಲು ಕಾರ್ಯತಂತ್ರ ರೂಪಿಸಿದೆ.

2 ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ್ದು, 35 ಎಸೆತಗಳಲ್ಲಿ ಭರ್ಜರಿ ಶತಕ ಗಳಿಸಿದ್ದರು. ಇಂದಿನ ಪಂದ್ಯದಲ್ಲಿಯೂ ರೋಹಿತ್ ಶರ್ಮಾ ಹಾಗೂ ಕೆ.ಎಲ್. ರಾಹುಲ್ ಮಿಂಚುವ ವಿಶ್ವಾಸವಿದೆ.

ಶ್ರೇಯಸ್ ಅಯ್ಯರ್, ಎಂ.ಎಸ್. ಧೋನಿ, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್ ಕೂಡ ಉತ್ತಮ ಪ್ರದರ್ಶನ ನೀಡಲು ಸಜ್ಜಾಗಿದ್ದಾರೆ. ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್ ಕಳೆದ ಪಂದ್ಯಗಳಲ್ಲಿ ಬೌಲಿಂಗ್ ನಲ್ಲಿ ಮಿಂಚು ಹರಿಸಿದ್ದಾರೆ.

ಪ್ರವಾಸಿ ಶ್ರೀಲಂಕಾ ಟೆಸ್ಟ್, ಏಕದಿನ ಹಾಗೂ ಟಿ -20 ಸರಣಿಯನ್ನು ಸೋತಿದ್ದು, ಇಂದಿನ ಪಂದ್ಯವನ್ನು ಗೆಲ್ಲಲು ಕಾರ್ಯತಂತ್ರ ರೂಪಿಸಿದೆ. ಸಂಜೆ 7 ಗಂಟೆಗೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...