alex Certify
ಕನ್ನಡ ದುನಿಯಾ       Mobile App
       

Kannada Duniya

ಆಶೀಶ್ ನೆಹ್ರಾ ಬಳಿ ಇಲ್ವಂತೆ ಸ್ಮಾರ್ಟ್ ಫೋನ್ !

Bengaluru : Ashish Nehra addressing a press conference before a training session at Chinnaswamy Stadium in Bengaluru on Tuesday. PTI Photo by Shailendra Bhojak  (PTI3_22_2016_000205B)ಟಿ20 ವಿಶ್ವ ಕಪ್ ನಲ್ಲಿ ಭಾರತಕ್ಕಿಂದು ‘ಮಾಡು ಇಲ್ಲವೇ ಮಡಿ’ ಪಂದ್ಯ. ಸೆಮಿಫೈನಲ್ ತಲುಪಬೇಕೆಂದರೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಂಗ್ಲಾ ದೇಶದ ವಿರುದ್ದ ನಡೆಯಲಿರುವ ಪಂದ್ಯದಲ್ಲಿ ಭಾರತ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ. ಇದಕ್ಕಾಗಿ ಧೋನಿ ಬಾಯ್ಸ್ ಭರ್ಜರಿ ರಣತಂತ್ರ ರೂಪಿಸುತ್ತಿದ್ದಾರೆ.

ಈ ಮಧ್ಯೆ ಭಾರತ ಹಾಗೂ ಬಾಂಗ್ಲಾ ದೇಶದ ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲ ತಾಣದಲ್ಲಿ ಕದನಕ್ಕೆ ಬಿದ್ದಿದ್ದಾರೆ. ತಮ್ಮ ತಮ್ಮ ತಂಡಗಳ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಜೊತೆಗೆ ಯೂ ಟ್ಯೂಬ್ ನಲ್ಲೂ ವಿಡಿಯೋ ಹರಿಬಿಟ್ಟಿದ್ದಾರೆ. ಒಟ್ಟಿನಲ್ಲಿ ಇಂದಿನ ಪಂದ್ಯ ಉಭಯ ತಂಡಗಳಿಗೂ ಪ್ರತಿಷ್ಟೆಯ ಪ್ರಶ್ನೆಯಾಗಿದ್ದು, ವಿಜಯ ಮಾಲೆ ಯಾರಿಗೆ ಒಲಿಯಲಿದೆ ಎಂಬ ಕುತೂಹಲದ ಮಧ್ಯೆ ಟೀಮ್ ಇಂಡಿಯಾ ಆಟಗಾರ ಆಶೀಶ್ ನೆಹ್ರಾ ನೀಡಿರುವ ಹೇಳಿಕೆ ಕುತೂಹಲಕಾರಿಯಾಗಿದೆ.

ಭಾರತ ಹಾಗೂ ಬಾಂಗ್ಲಾ ಕ್ರಿಕೆಟ್ ಪ್ರೇಮಿಗಳ ವರ್ತನೆ ಕುರಿತಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಆಶೀಶ್ ನೆಹ್ರಾ, ತಮ್ಮ ಬಳಿ ಇರುವುದು ಹಳೆಯ ನೋಕಿಯಾ ಫೋನ್. ಅಲ್ಲದೇ ಸಾಮಾಜಿಕ ಜಾಲ ತಾಣಗಳಾದ ಫೇಸ್ ಬುಕ್, ಟ್ವೀಟರ್ ಹಾಗೂ ಇನ್ಸ್ಟಾಗ್ರಾಂ ನಲ್ಲಿ ತಾವು ಖಾತೆ ಹೊಂದಿಲ್ಲ. ಜೊತೆಗೆ ತಾವು ಪತ್ರಿಕೆಗಳನ್ನು ಓದುವುದಿಲ್ಲವಾದ್ದರಿಂದ ಈ ಕುರಿತು ಯಾವುದೇ ಮಾಹಿತಿಯಿಲ್ಲವೆಂದಿದ್ದಾರೆ.

Related News

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...