alex Certify
ಕನ್ನಡ ದುನಿಯಾ       Mobile App
       

Kannada Duniya

ದೆಹಲಿಯಲ್ಲಿ 2020 ರ ಶೂಟಿಂಗ್ ವಿಶ್ವಕಪ್

ವಿಶ್ವ ಮಟ್ಟದಲ್ಲಿ ಭಾರತೀಯ ಶೂಟರ್ ಗಳ ಗುರಿಯ ಬಗ್ಗೆ ಚರ್ಚೆಗಳು ನಡೆದಿವೆ. ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಏಷ್ಯನ್ ಗೇಮ್ಸ್ ನಲ್ಲಿ ಪದಕದ ಆಸೆಯನ್ನು ಚಿಗುರಿಸಿರುವ ಸ್ಟಾರ್ ಶೂಟರ್ ಗಳ ಪಾಲಿಗೆ ಸಿಹಿ ಸುದ್ದಿ ಬಂದಿದೆ.

ಹೌದು….ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಶೂಟಿಂಗ್ ಟೂರ್ನಿ ಗಮನಿಸಿದ ಅಂತಾರಾಷ್ಟ್ರೀಯ ಶೂಟಿಂಗ್ ಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ. ಅಲ್ಲದೆ ಹಲವು ಅಂತಾರಾಷ್ಟ್ರೀಯ ಟೂರ್ನಿಗಳನ್ನು ಅಚ್ಚುಕಟ್ಟಾಗಿ ನಡೆಸಿರುವುದನ್ನು ಶ್ಲಾಘಿಸಿದೆ. ಭಾರತದ ಶೂಟರ್ ಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪು ಮೂಡಿಸಿದ್ದು, ಟೋಕಿಯೊ ಒಲಿಂಪಿಕ್ಸ್ ಗೆ ಸಿದ್ಧರಾಗಲು, ಸದಾವಕಾಶವನ್ನು ಅಂತಾರಾಷ್ಟ್ರೀಯ ಶೂಟಿಂಗ್ ಸಂಸ್ಥೆ ಕಲ್ಪಿಸಿಕೊಟ್ಟಿದೆ.

ಟೋಕಿಯೊ ಒಲಿಂಪಿಕ್ಸ್ ಪೂರ್ವಭಾವಿಯಾಗಿ ನಡೆಯುವ, ಶೂಟಿಂಗ್ ವಿಶ್ವಕಪ್ 2020 ದೆಹಲಿಯಲ್ಲಿ ನಡೆಯಲಿದೆ. ಫೆಬ್ರವರಿ 20 ರಿಂದ 28 ರ ವರೆಗೆ ಟೂರ್ನಿಯನ್ನು ಆಯೋಜಿಸಲು ಚಿಂತನೆ ನಡೆದಿದ್ದು, ಈ ಕುರಿತಾಗಿ ಕೆಲವೇ ದಿನಗಳಲ್ಲಿ ಅಂತಿಮ ನಿರ್ಧಾರವನ್ನು ಅಂತಾರಾಷ್ಟ್ರೀಯ ಶೂಟಿಂಗ್ ಸಂಸ್ಥೆ ಹೊರಡಿಸಲಿದೆ. ಈ ಚಾಂಪಿಯನ್ ಶಿಪ್ ಶೂಟರ್ ಗಳಿಗೆ ಒಲಿಂಪಿಕ್ಸ್ ಗೆ ಅರ್ಹತೆ ಪಡೆಯಲು ನೆರವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...