alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಧಾನಿ ಮೋದಿಯವರನ್ನು ವಿರುಷ್ಕಾ ಜೋಡಿ ಭೇಟಿಯಾಗಿದ್ದೇಕೆ ಗೊತ್ತಾ…?

ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಡಿಸೆಂಬರ್ 11 ರಂದು ಕುಟುಂಬ ಸದಸ್ಯರ ಸಮ್ಮುಖದಲ್ಲಿ ಇಟಲಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಹನಿಮೂನ್ ಮುಗಿಸಿಕೊಂಡು ಬಂದ ಜೋಡಿ, ಆತ್ಮೀಯರಿಗಾಗಿ ದೆಹಲಿ ಹಾಗೂ ಮುಂಬೈನಲ್ಲಿ ಔತಣಕೂಟವನ್ನೇರ್ಪಡಿಸಿದೆ.

ಡಿಸೆಂಬರ್ 21 ರಂದು ನವದೆಹಲಿಯಲ್ಲಿ ಹಾಗೂ ಡಿಸೆಂಬರ್ 26 ರಂದು ಮುಂಬೈನಲ್ಲಿ ಅದ್ದೂರಿ ಔತಣಕೂಟ ನಡೆಯಲಿದ್ದು, ಇದರಲ್ಲಿ ಟೀಮ್ ಇಂಡಿಯಾ ಆಟಗಾರರಲ್ಲದೇ ವಿದೇಶಿ ಕ್ರಿಕೆಟಿಗರೂ ಹಾಗೂ ಬಾಲಿವುಡ್ ಗಣ್ಯರು ಜೊತೆಗೆ ರಾಜಕೀಯ ನಾಯಕರೂ ಪಾಲ್ಗೊಳ್ಳಲಿದ್ದಾರೆ.

ಬುಧವಾರದಂದು ನವದೆಹಲಿಗೆ ಬಂದಿಳಿದ ನವ ಜೋಡಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ವಿವಾಹ ರಿಸೆಪ್ಶನ್ ಗೆ ಆಹ್ವಾನ ನೀಡಿದ್ದಾರೆ. ಪ್ರಧಾನಿ ಕಾರ್ಯಾಲಯ ಈ ಕುರಿತು ಟ್ವೀಟ್ ಮಾಡಿದ್ದು, ನರೇಂದ್ರ ಮೋದಿಯವರು ಈ ಸಮಾರಂಭದಲ್ಲಿ ಪಾಲ್ಗೊಳ್ಳುವುದರ ಕುರಿತು ಯಾವುದೇ ಮಾಹಿತಿ ನೀಡಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...