alex Certify
ಕನ್ನಡ ದುನಿಯಾ       Mobile App
       

Kannada Duniya

ಟೀಂ ಇಂಡಿಯಾ ಕೋಚ್ ಆಯ್ಕೆ ಇನ್ನೂ ಮಾಡಿಲ್ವಂತೆ

bcci-srr

ಮುಂಬೈ: ಅನಿಲ್ ಕುಂಬ್ಳೆ ಅವರಿಂದ ತೆರವಾದ ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ, ರವಿಶಾಸ್ತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿತ್ತು.

ಆದರೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿ.ಸಿ.ಸಿ.ಐ.)ಯಿಂದ ಕೋಚ್ ಆಯ್ಕೆ ಕುರಿತಾಗಿ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಬಿ.ಸಿ.ಸಿ.ಐ. ಕಾರ್ಯದರ್ಶಿ ಅಮಿತಾಬ್ ಚೌಧರಿ ತಿಳಿಸಿದ್ದಾರೆ.

ಸೌರವ್ ಗಂಗೂಲಿ, ಸಚಿನ್ ತೆಂಡೂಲ್ಕರ್, ವಿ.ವಿ.ಎಸ್. ಲಕ್ಷ್ಮಣ್ ಅವರನ್ನೊಳಗೊಂಡ ಸಲಹಾ ಸಮಿತಿಯಿಂದ ನಿನ್ನೆಯಷ್ಟೇ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದವರ ಸಂದರ್ಶನ ನಡೆಸಲಾಗಿತ್ತು.

ಸದ್ಯಕ್ಕೆ ಅವಸರವಿಲ್ಲ. ಟೀಂ ಇಂಡಿಯಾ ನಾಯಕನೊಂದಿಗೆ ಚರ್ಚಿಸಿ, ಕೋಚ್ ಯಾರು ಎಂಬುದನ್ನು ತಿಳಿಸಲಾಗುವುದು ಎಂದು ಗಂಗೂಲಿ ಹೇಳಿದ್ದರು.

ಅವರು ಹೀಗೆ ಹೇಳಿದ್ದರೂ, ಮಂಗಳವಾರ ಮಧ್ಯಾಹ್ನದ ವೇಳೆಗೆ ನಾಯಕ ವಿರಾಟ್ ಕೊಹ್ಲಿ ಸಲಹೆಯಂತೆ ರವಿಶಾಸ್ತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿತ್ತು.

ಇದಾದ ಬಳಿಕ ಸ್ಪಷ್ಟನೆ ನೀಡಿರುವ ಬಿ.ಸಿ.ಸಿ.ಐ. ಕಾರ್ಯದರ್ಶಿ ಅಮಿತಾಬ್ ಚೌಧರಿ, ಕೋಚ್ ಹುದ್ದೆಗೆ ಯಾರನ್ನೂ ಆಯ್ಕೆ ಮಾಡಿಲ್ಲ. ನಿರ್ಧಾರವನ್ನು ಕಾಯ್ದಿರಿಸಲಾಗಿದೆ. ಶೀಘ್ರವೇ ಕೋಚ್ ಯಾರು ಎಂಬುದನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...