alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ರೀಡಾ ಸಚಿವರ ವಿರುದ್ಧ ಕಿಡಿ ಕಾರಿದ ಆಟಗಾರ್ತಿ

anju

ತಿರುವನಂತಪುರಂ: ಇತ್ತೀಚೆಗಷ್ಟೇ ನಿಧನರಾದ ವಿಶ್ವ ವಿಖ್ಯಾತ ಬಾಕ್ಸರ್ ಮಹಮ್ಮದ್ ಅಲಿ ಕೇರಳದವರೆಂದು ಹೇಳುವ ಮೂಲಕ ನಗೆಪಾಟಲಿಗೀಡಾಗಿದ್ದ ಕೇರಳ ಕ್ರೀಡಾ ಸಚಿವ ಇ.ಪಿ.ಜಯರಾಜನ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

ಕೇರಳ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷೆಯಾಗಿರುವ ಖ್ಯಾತ ಅಥ್ಲೀಟ್ ಅಂಜು ಬಾಬಿ ಜಾರ್ಜ್ ಅವರನ್ನು ಸಚಿವರು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಈ ಕುರಿತಂತೆ ಅಂಜು ಬಾಬಿ ಜಾರ್ಜ್ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ದೂರು ನೀಡಿದ್ದು, ಸಚಿವರು ಅವಾಚ್ಯ ಪದಗಳಿಂದ ತಮ್ಮನ್ನು ನಿಂದಿಸಿದ್ದಾರೆ. ಅಲ್ಲದೇ, ಪ್ರಾಧಿಕಾರದ ಸದಸ್ಯರಿಗೂ ಅವರು ತೊಂದರೆ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಾನು ಯಾವುದೇ ಪಕ್ಷದ ಕಾರ್ಯಕರ್ತೆಯಲ್ಲ. ಕ್ರೀಡಾ ಕ್ಷೇತ್ರವೇ ನನ್ನ ಪಕ್ಷ. ಈ ಕ್ಷೇತ್ರದ ಬೆಳವಣಿಗೆ ನನಗೆ ಮುಖ್ಯ. ಆದರೆ, ಕೆಲವು ಪಟ್ಟಭದ್ರರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಇಲಾಖೆಯ ಬಗ್ಗೆ ಏನೂ ತಿಳಿಯದ ಸಚಿವರು, ತಮಗೆ ನಿಂದಿಸಿ ಮಾನಸಿಕ ಕಿರುಕುಳ ನೀಡಿರುವುದಾಗಿ ಅಂಜು ದೂರಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...