alex Certify ಒಲಿಂಪಿಕ್​ ‘ಚಿನ್ನ’ದ ಪದಕ ವಿಜೇತೆ ಕೋವಿಡ್​ನಿಂದ ಆಸ್ಪತ್ರೆಗೆ ದಾಖಲು….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಲಿಂಪಿಕ್​ ‘ಚಿನ್ನ’ದ ಪದಕ ವಿಜೇತೆ ಕೋವಿಡ್​ನಿಂದ ಆಸ್ಪತ್ರೆಗೆ ದಾಖಲು….!

ಒಲಿಂಪಿಕ್​ನಲ್ಲಿ ಚಿನ್ನದ ಪದಕ ಸಂಪಾದಿಸಿದ್ದ ಆಸ್ಟ್ರೇಲಿಯಾದ ಈಜುಗಾರ್ತಿ ಮ್ಯಾಡಿಸನ್​ ವಿಲ್ಸನ್​ ಕೋವಿಡ್​ 19 ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎರಡೂ ಡೋಸ್​ ಲಸಿಕೆಗಳನ್ನು ಸ್ವೀಕರಿಸಿರುವ ವಿಲ್ಸನ್​ ಕೋವಿಡ್​ ಹಿನ್ನೆಲೆಯಲ್ಲಿ ಇಟಲಿಯ ಅಂತಾರಾಷ್ಟ್ರೀಯ ಸ್ವಿಮ್​ ಲೀಗ್​ನಿಂದ ಹಿಂದೆ ಸರಿದಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಈ ಕುರಿತು ಮಾಹಿತಿ ನೀಡಿರುವ ವಿಲ್ಸನ್​ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ನಾನು ಈಗ ವಿಶ್ರಾಂತಿಯನ್ನು ಪಡೆಯುತ್ತಿದ್ದೇನೆ. ಶೀಘ್ರದಲ್ಲೇ ನಾನು ಸಹಜ ಸ್ಥಿತಿಗೆ ಮರಳುತ್ತೇನೆ ಎಂಬ ನಂಬಿಕೆ ಇದೆ ಎಂದು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಶೇರ್ ಮಾಡಿದ್ದಾರೆ.

27 ವರ್ಷದ ಈಜುಪಟು ಟೋಕಿಯೋ ಒಲಿಂಪಿಕ್ಸ್​ನಲ್ಲಿ ಆಸ್ಟ್ರೇಲಿಯಾವನ್ನು ಪ್ರತಿನಿಧಿಸಿದ್ದರು. 4×100 ಮೀಟರ್ ಫ್ರೀಸ್ಟೈಲ್‌ನಲ್ಲಿ ಚಿನ್ನದ ಪದಕ ಹಾಗೂ 4×200 ಫ್ರೀ ರಿಲೆಯಲ್ಲಿ ಕಂಚಿನ ಪದಕವನ್ನು ಸಂಪಾದಿಸಿದ್ದಾರೆ. 2016ರ ರಿಯೋ ಒಲಿಂಪಿಕ್ಸ್​ನಲ್ಲಿ ವಿಲ್ಸನ್​​ ರಿಲೇಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕವನ್ನು ಸಂಪಾದಿಸಿದ್ದರು.

ನಾನು ಎರಡು ಡೋಸ್​ ಲಸಿಕೆಗಳನ್ನು ಪಡೆದುಕೊಂಡಿದ್ದೇನೆ ಹಾಗೂ ಕೊರೊನಾದ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿದ್ದೇನೆ. ಆದರೂ ನಾನು ಸೋಂಕಿಗೆ ಒಳಗಾಗಿದ್ದೇನೆ ಎಂದು ವಿಲ್ಸನ್​ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...