alex Certify
ಕನ್ನಡ ದುನಿಯಾ       Mobile App
       

Kannada Duniya

ಟಿ-20 ಯಲ್ಲಿ ನೂತನ ದಾಖಲೆ ನಿರ್ಮಿಸಿದ ಪಾಕ್…!

ಟಿ-20 ಕ್ರಿಕೆಟ್ ನಲ್ಲಿ ಬಲಿಷ್ಠ ತಂಡವಾಗಿರುವ ಪಾಕಿಸ್ತಾನ, ನ್ಯೂಜಿಲೆಂಡ್ ತಂಡದ ವಿರುದ್ಧ ಶುಕ್ರವಾರ ರಾತ್ರಿ‌ ಗೆಲ್ಲುವ ಮೂಲಕ‌ ನೂತನ ದಾಖಲೆಗಳನ್ನು ಬರೆದಿದೆ.

ದುಬೈನಲ್ಲಿ ಶುಕ್ರವಾರ ನಡೆದ ನ್ಯೂಜಿಲೆಂಡ್-ಪಾಕಿಸ್ತಾನ ನಡುವಿನ ಟಿ-20 ಪಂದ್ಯದಲ್ಲಿ ಗೆಲ್ಲುವ ಮೂಲಕ ಟಿ-20 ಇತಿಹಾಸದಲ್ಲಿ ಸತತ 11 ಪಂದ್ಯಗಳನ್ಜು ಗೆದ್ದ ಮೊದಲ ತಂಡ ಎನ್ನುವ ನೂತನ ದಾಖಲೆಯನ್ನು ನಿರ್ಮಿಸಿದೆ.

ಇದರೊಂದಿಗೆ 2018 ನೇ ವರ್ಷದಲ್ಲಿ 16 ಪಂದ್ಯಗಳಲ್ಲಿ ಗೆಲ್ಲುವ ಮೂಲಕ, ವರ್ಷ ಒಂದರಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆಯನ್ನೂ ಪಾಕ್ ಆಟಗಾರರು ಬರೆದಿದ್ದಾರೆ.

ನ್ಯೂಜಿಲೆಂಡ್ ನೀಡಿದ 154 ರನ್ ಗಳನ್ನು ಬೆನ್ನತ್ತಿದ ಪಾಕ್,‌ ಆರಂಭದಿಂದಲೂ ಉತ್ತಮ ಬ್ಯಾಟಿಂಗ್ ಮೂಲಕ ಗೆಲ್ಲುವ ವಿಶ್ವಾಸ ಮೂಡಿಸಿತ್ತು.‌ ಬಾಬರ್ ಅಜಂ ಹಾಗೂ ಮೊಹಮ್ಮದ್ ಹಫೀಜ್ ಉತ್ತಮ ರೀತಿಯಲ್ಲಿ ಇನ್ನಿಂಗ್ಸ್ ಕಟ್ಟಿ, ತಂಡವನ್ನು ಗೆಲುವಿನತ್ತ ತಗೆದುಕೊಂಡು‌ ಹೋದರು. ಇದಕ್ಕೂ ಮೊದಲು ಅಫ್ರಿದಿ‌ ಮೂರು ವಿಕೆಟ್ ಕಬಳಿಸುವ ಮೂಲಕ,‌ ನ್ಯೂಜಿಲೆಂಡ್ ಆಟಗಾರರನ್ನು ಕಾಡಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...