alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಪಾಟ್ ಫಿಕ್ಸಿಂಗ್: ಕ್ರಿಕೆಟಿಗನಿಗೆ 5 ವರ್ಷ ನಿಷೇಧ

ಲಾಹೋರ್: ಪಾಕಿಸ್ತಾನ ಕ್ರಿಕೆಟ್ ನಲ್ಲಿ ಭಾರೀ ಸಂಚಲನ ಮೂಡಿಸಿದ್ದ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಆರಂಭಿಕ ಆಟಗಾರ ಶಾರ್ಜಿಲ್ ಖಾನ್ ಗೆ 5 ವರ್ಷಗಳ ಕಾಲ ನಿಷೇಧ ಹೇರಲಾಗಿದೆ.

ಪಾಕಿಸ್ತಾನ ಸೂಪರ್ ಲೀಗ್ ನಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಫೆಬ್ರವರಿಯಲ್ಲಿ 28 ವರ್ಷದ ಎಡಗೈ ಆರಂಭಿಕ ಆಟಗಾರ ಶಾರ್ಜಿಲ್ ಖಾನ್ ನನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಮಾನತು ಮಾಡಿತ್ತು. ಈಗ ಟ್ರಿಬ್ಯುನಲ್ ಅವರಿಗೆ 5 ವರ್ಷ ನಿಷೇಧ ಹೇರಿದೆ.

ಫೆಬ್ರವರಿಯಲ್ಲಿ ದುಬೈನಲ್ಲಿ ಇಸ್ಲಾಮಾಬಾದ್ ಯುನೈಟೆಡ್ ಮತ್ತು ಪೇಶಾವರ್ ಜಲ್ಮಿ ಟೀಂಗಳ ನಡುವೆ ನಡೆದ ಪಂದ್ಯದಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿದ ಆರೋಪ ಕೇಳಿ ಬಂದಿತ್ತು.

ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಭ್ರಷ್ಟಾಚಾರ ವಿರೋಧಿ ಘಟಕದಿಂದ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗಿತ್ತು. ಈಗ ಭ್ರಷ್ಟಾಚಾರ ವಿರೋಧಿ ನ್ಯಾಯಾಧೀಕರಣ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಾರ್ಜಿಲ್ ಖಾನ್ ಅವರಿಗೆ 5 ವರ್ಷ ನಿಷೇಧ ಹೇರಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...