alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪಾಕ್ ಪಡೆದ ಪದಕಗಳೆಷ್ಟು ಗೊತ್ತಾ?

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಕ್ರೀಡಾಪಟುಗಳು ದೇಶದ ಹಿರಿಮೆಯನ್ನು ಎತ್ತಿ ಹಿಡಿದಿದ್ದಾರೆ. 26 ಚಿನ್ನ, 20 ಬೆಳ್ಳಿ ಹಾಗೂ 20 ಕಂಚಿನ ಪದಕ ಸೇರಿದಂತೆ ಒಟ್ಟು 66 ಪದಕ ಪಡೆಯುವ ಮೂಲಕ ಪದಕಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನ ಗಳಿಸಿದೆ.

ನೆರೆ ರಾಷ್ಟ್ರ ಪಾಕಿಸ್ತಾನ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಕಳಪೆ ಸಾಧನೆ ಮಾಡಿದ್ದು, 1 ಚಿನ್ನ ಹಾಗೂ 4 ಕಂಚಿನ ಪದಕದೊಂದಿಗೆ ಒಟ್ಟು 5 ಪದಕಗಳನ್ನು ಪಡೆಯುವ ಮೂಲಕ ಪದಕಗಳ ಪಟ್ಟಿಯಲ್ಲಿ 24 ನೇ ಸ್ಥಾನ ಗಳಿಸಿದೆ.

ಪಾಕಿಸ್ತಾನದ ಈ ಹೀನಾಯ ಪ್ರದರ್ಶನ ಕುರಿತು ಭಾರತೀಯರು ಸಾಮಾಜಿಕ ಜಾಲತಾಣಗಳಲ್ಲಿ ಕಾಲೆಳೆಯುತ್ತಿದ್ದು, ಕ್ರೀಡೆಯಲ್ಲಿ ಮೊದಲು ಸಾಧನೆ ಮಾಡಿ ಎಂದು ಗೇಲಿ ಮಾಡಿದ್ದಾರೆ. ಜೊತೆಗೆ ಕೆಲವೊಂದು ತಮಾಷೆಯ ಫೋಟೋಗಳನ್ನೂ ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...