alex Certify
ಕನ್ನಡ ದುನಿಯಾ       Mobile App
       

Kannada Duniya

ಟಿ-20 ಕ್ರಿಕೆಟ್ ಗೂ ವಿದಾಯ ಹೇಳಿದ ಅಫ್ರಿದಿ

afriddeee

ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ, ಅಂತರರಾಷ್ಟ್ರೀಯ ಟಿ-20 ಕ್ರಿಕೆಟ್ ಗೂ ವಿದಾಯ ಹೇಳಿದ್ದಾರೆ.

36 ವರ್ಷದ ಅಫ್ರಿದಿ ಅಂತರರಾಷ್ಟ್ರೀಯ ಟೆಸ್ಟ್ ಹಾಗೂ ಏಕದಿನ ಪಂದ್ಯಗಳಿಗೆ ಹಿಂದೆಯೇ ನಿವೃತ್ತಿ ಘೋಷಿಸಿದ್ದರು. ಈಗ ಅಂತರರಾಷ್ಟ್ರೀಯ ಟಿ-20 ಪಂದ್ಯಗಳಿಂದಲೂ ದೂರವಾಗುವುದಾಗಿ ಘೋಷಿಸಿದ್ದಾರೆ.

21 ವರ್ಷಗಳ ಕಾಲ ಪಾಕ್ ತಂಡವನ್ನು ಪ್ರತಿನಿಧಿಸಿದ್ದ ಅಫ್ರಿದಿ, 2016 ರಲ್ಲಿ ಭಾರತದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಸೋಲಿನ ಬಳಿಕ ಟಿ-20 ನಾಯಕತ್ವಕ್ಕೆ ಗುಡ್ ಬೈ ಹೇಳಿದ್ದರು.

1996 ರಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ 37 ಎಸೆತಗಳಲ್ಲಿ ಶತಕ ಬಾರಿಸಿ ದಾಖಲೆ ಬರೆದಿದ್ದರು. 27 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು, 156 ಗರಿಷ್ಟ ರನ್ ಸೇರಿ 1776 ರನ್ ಗಳಿಸಿ, 48 ವಿಕೆಟ್ ಕಬಳಿಸಿದ್ದಾರೆ. 398 ಏಕದಿನ ಪಂದ್ಯಗಳಿಂದ 8064 ರನ್ ಗಳಿಸಿದ್ದು, ಬೌಲಿಂಗ್ ನಲ್ಲಿಯೂ ಮಿಂಚಿ 395 ವಿಕೆಟ್ ಪಡೆದಿದ್ದಾರೆ.

98 ಟಿ-20 ಪಂದ್ಯಗಳಿಂದ 1405 ರನ್, 97 ವಿಕೆಟ್ ಗಳಿಸಿದ್ದಾರೆ. ಈಗ ಎಲ್ಲಾ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳುವುದಾಗಿ ಘೋಷಿಸಿದ್ದು, ದೇಶೀಯ ಮತ್ತು ವಿದೇಶಿ ಲೀಗ್ ಪಂದ್ಯಗಳಲ್ಲಿ ಆಡುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...