alex Certify
ಕನ್ನಡ ದುನಿಯಾ       Mobile App
       

Kannada Duniya

ಟೀಂ ಇಂಡಿಯಾ ವೇಗಿ ಮನೆಗೆ ಕನ್ನ ಹಾಕಲು ಯತ್ನಿಸಿದವರು ಈಗ ಕಂಬಿ ಹಿಂದೆ…!

ಏಷ್ಯಾಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಪರ ಪದಾರ್ಪಣೆ ಮಾಡಿದ ವೇಗಿ ದೀಪಕ್ ಚಹಾರ್ ಅವರ ಆಗ್ರಾದ ಮಾನಸ ಸರೋವರ ಕಾಲೋನಿಯಲ್ಲಿರುವ ಮನೆಗೆ ದರೋಡೆಕೋರರು ನುಗ್ಗಲು ಯತ್ನಿಸಿದ್ದಾರೆ.

ಮನೆಯಲ್ಲಿ ದೀಪಕ್ ಚಹಾರ್ ಅವರ ತಾಯಿ ಒಬ್ಬರೇ ಇದ್ದಿದ್ದನ್ನು ಗಮನಿಸಿದ ದರೋಡೆಕೋರರು ಸಿಸಿ ಟಿವಿ ಕೇಬಲ್ ಅನ್ನು ಕತ್ತರಿಸಿ ಮನೆಯ ಬಾಗಿಲು ತೆರೆಯಲು ಯತ್ನಿಸಿದ್ದರು. ಚಹರ್ ತಾಯಿಗೆ ಎಚ್ಚರವಾಗಿ ಸಹಾಯಕ್ಕಾಗಿ ಕೂಗಿಕೊಂಡರಂತೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರಿಂದ 2 ಪಿಸ್ತೂಲ್, ಆಟೋ ರಿಕ್ಷಾ, 5 ಕಂಪ್ಯೂಟರ್ ಮಾನಿಟರ್ಸ್ ಹಾಗೂ ಇತರೇ ಮನೆಗಳಲ್ಲಿ ಕಳ್ಳತನ ಮಾಡಿದ್ದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. 6 ಮಂದಿಯ ವಿರುದ್ಧ ಐಪಿಸಿ ಸೆಕ್ಷನ್ ಅನ್ವಯ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...