alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿಗೆ ಲೈಂಗಿಕ ಕಿರುಕುಳ: 4 ವರ್ಷಗಳ ಬಳಿಕ ಉದ್ಯಮಿ ಮೇಲೆ ಚಾರ್ಜ್ ಶೀಟ್

ಬಾಲಿವುಡ್ ನಟಿ ಪ್ರೀತಿ ಜಿಂಟಾ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 4 ವರ್ಷಗಳ ಬಳಿಕ ಉದ್ಯಮಿ ನೆಸ್ ವಾಡಿಯಾ ವಿರುದ್ಧ ಆರೋಪ ಪಟ್ಟಿ ದಾಖಲಾಗಿದೆ. Esplanade ಕೋರ್ಟ್ ನಲ್ಲಿ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ.

ಸೆಕ್ಷನ್ 354, 506 ಹಾಗೂ 509ರ ಅಡಿಯಲ್ಲಿ ಆರೋಪ ಪಟ್ಟಿ ದಾಖಲಿಸಲಾಗಿದೆ. 2014ರ ಮೇ 30 ರಂದು ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ ವಾಂಖೆಡೆ ಸ್ಟೇಡಿಯಂನಲ್ಲಿ ಈ ಘಟನೆ ನಡೆದಿತ್ತು. 2014ರ ಜೂನ್ ನಲ್ಲಿ ಪ್ರೀತಿ ಜಿಂಟಾ ಮುಂಬೈನ ಮರೀನ್ ಡ್ರೈವ್ ಪೊಲೀಸ್ ಠಾಣೆಯಲ್ಲಿ ನೆಸ್ ವಾಡಿಯಾ ವಿರುದ್ಧ ದೂರು ದಾಖಲು ಮಾಡಿದ್ದರು.

ಪ್ರೀತಿ ಹಾಗೂ ನೆಸ್ ಇಬ್ಬರೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕರಾಗಿದ್ದರು. ಟಿಕೆಟ್ ಹಂಚಿಕೆಗೆ ಸಂಬಂಧಪಟ್ಟಂತೆ ನೆಸ್, ಸಿಬ್ಬಂದಿ ವಿರುದ್ಧ ಹರಿಹಾಯ್ದಿದ್ದರಂತೆ. ಅವರನ್ನು ಶಾಂತಪಡಿಸಲು ಪ್ರೀತಿ ಯತ್ನಿಸಿದ್ದಾರೆ. ಈ ವೇಳೆ ಪ್ರೀತಿಗೆ ಕೆಟ್ಟದಾಗಿ ನಿಂದಿಸಿದ ನೆಸ್ ವಾಡಿಯಾ, ಬಲವಂತವಾಗಿ ಬರಸೆಳೆದುಕೊಂಡಿದ್ದಾರೆ ಅಂತಾ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಆ ಫೋಟೋ ಕೂಡ ವೈರಲ್ ಆಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...