alex Certify
ಕನ್ನಡ ದುನಿಯಾ       Mobile App
       

Kannada Duniya

ಕುಂಬ್ಳೆ ಸ್ಥಾನಕ್ಕೆ ದ್ರಾವಿಡ್ ಸೂಕ್ತ ಆಯ್ಕೆ: ರಿಕಿ ಪಾಂಟಿಂಗ್

rick-dravd

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಅವರ ಅಧಿಕಾರದ ಅವಧಿ ಮುಂದಿನ ತಿಂಗಳಿಗೆ ಮುಕ್ತಾಯವಾಗಲಿದೆ.

ಅವರ ಬಳಿಕ ಟೀಂ ಇಂಡಿಯಾ ಕೋಚ್ ಆಗಲು ಮಾಜಿ ನಾಯಕ ರಾಹುಲ್ ದ್ರಾವಿಡ್ ಸೂಕ್ತ ವ್ಯಕ್ತಿ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಬಳಿಕ ಅನಿಲ್ ಕುಂಬ್ಳೆ ಮುಖ್ಯ ಕೋಚ್ ಹುದ್ದೆಯನ್ನು ತ್ಯಜಿಸಲಿದ್ದು, ಈಗಾಗಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅರ್ಜಿಯನ್ನು ಆಹ್ವಾನಿಸಿದೆ.

ರಾಹುಲ್ ದ್ರಾವಿಡ್ ಭಾರತ ‘ಎ’ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಿದ್ದು, ಅನೇಕ ಯುವ ಕ್ರಿಕೆಟಿಗರಿಗೆ ಮಾರ್ಗದರ್ಶನ ನೀಡಿದ್ದಾರೆ. ಅವರ ಸಲಹೆ ಪಡೆದ ಯುವ ಕ್ರಿಕೆಟಿಗರು ಮಿಂಚುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ರಿಕಿ ಪಾಂಟಿಗ್, ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗಲು ಉತ್ತಮ ಆಯ್ಕೆ ಎಂದು ತಿಳಿಸಿದ್ದಾರೆ. ಕ್ರಿಕೆಟ್ ನ ಎಲ್ಲಾ ಮಾದರಿಯಲ್ಲಿ ಆಡಿರುವ ದ್ರಾವಿಡ್ ಕ್ರಿಕೆಟ್ ಗೆ ಸಾಕಷ್ಟು ಕೊಡುಗೆಯನ್ನು ನೀಡಿದ್ದು, ಯುವ ಆಟಗಾರರಿಗೆ ಸ್ಪೂರ್ತಿಯಾಗಿದ್ದಾರೆ. ಅವರನ್ನು ಮುಖ್ಯ ಕೋಚ್ ಹುದ್ದೆಗೆ ಆಯ್ಕೆ ಮಾಡುವುದು ಒಳ್ಳೆಯ ನಿರ್ಧಾರ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...